2026-03-07 07:25:49

Four people including a child die after tractor trolley overturns | ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ ಮಗು ಸೇರಿ ನಾಲ್ವರ ದುರ್ಮರಣ | Speed News Kannada

Four people including a child die after tractor trolley overturns | ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ ಮಗು ಸೇರಿ ನಾಲ್ವರ ದುರ್ಮರಣ | Speed News Kannada

ಬಾಗಲಕೋಟೆ: ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿಯಾಗಿ 2 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಟ್ಟೆ ಕೆರೆ ಬಳಿ ನಡೆದಿದೆ. ನಸುಕಿನ ಜಾವ 2 ಗಂಟೆ ವೇಳೆ ಘಟನೆ ನಡೆದಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಮತ್ತು ರೇಖಾ ಭೂಕೆ (28) ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆ ಬೂಸಾ ತಾಲೂಕಿನ ಗುಪವಾಡಿ ನಿವಾಸಿಗಳು ಎನ್ನಲಾಗಿದೆ. ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಘಟನೆ ಬಗ್ಗೆ ಎಸ್ಸಿ ಸಿದ್ಧಾರ್ಥ ಗೋಯಲ್ ಪ್ರತಿಕ್ರಿಯಿಸಿ, ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಅಪಘಾತವಾಗಿದೆ. ಮಹಾರಾಷ್ಟ್ರದಿಂದ ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದ ವಾಹನ ಇದಾಗಿದೆ. ಜೋಡಿ ಟ್ರಾಲಿಗಳು ಟ್ರಾಕ್ಟರ್ ಇಂಜಿನ್‌ನಿಂದ ಕಟ್ ಆಗಿ ಪಲ್ಟಿಯಾಗಿ ಅವಘಡ ಸಂಭವಿಸಿದೆ. ಒಂದು ಟ್ರಾಲಿ ಮೇಲೆ ಮತ್ತೊಂದು ಟ್ರಾಲಿ ಮಗುಚಿ ಬಿದ್ದ ಕಾರಣ ಅವಘಡವಾಗಿದೆ ಎಂದರು.ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಹಾರಾಷ್ಟ್ರದಿಂದ ಕಬ್ಬು ಕಟಾವು ಕೆಲಸಕ್ಕೆ ಬೆಳಗಾವಿ ಜಿಲ್ಲೆಯ ಯರಗಟ್ಟಿಗೆ ಬಂದಿದ್ದ ಕಾರ್ಮಿಕರು ಇಂದು ನಸುಕಿನ ಜಾವ ವಾಪಸ್ ತಮ್ಮೂರಿಗೆ ಹೊರಟಾಗ ಘಟನೆ ನಡೆದಿದೆ. ಘಟನೆ ಸಂಬಂಧ ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿ ಹತ್ಯೆಗೈದ ಪಾಪಿ ಪತಿ ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳಗೌಡನಪಾಳ್ಯದಲ್ಲಿ ನಡೆದಿದೆ. ಸಿಂಚನ (21) ಕೊಲೆಯಾದ ಮಹಿಳೆಯಾದರೆ ಪತಿ ರೇಣುಕಯ್ಯ ಪತ್ನಿಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪಿ.ಪತ್ನಿಯ ಶೀಲ ಶಂಕಿಸಿ ರೇಣುಕಯ್ಯ ಮನೆಯಲ್ಲಿ ಯಾವಾಗಲೂ ಗಲಾಟೆ ಮಾಡುತ್ತಿದ್ದ. ಅದರಂತೆ ಶುಕ್ರವಾರವೂ ಕೂಡ (ಫೆ.20) ಕೂಡ ಕುಡಿದು ಗಲಾಟೆ ನಡೆಸಿದ್ದ. ಗಲಾಟೆಯ ಭರದಲ್ಲಿ ಮನೆಯ ಮುಂದಿದ್ದ ಕಲ್ಲು ತಂದು ಅದನ್ನು ಪತ್ನಿಯ ತಲೆ ಮೇಲೆ ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಆತ ಸ್ಥಳದಿಂದ ಎಸ್ಕೆಪ್ ಆಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನೆ ಮಾಡಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.