2026-06-25 02:09:25

Four people including a nurse arrested for honey trapping | ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ 25 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ನರ್ಸ್ ಸೇರಿ ನಾಲ್ವರು ಅರೆಸ್ಟ್ | Speed News Kannada

Four people including a nurse arrested for honey trapping | ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ 25 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ನರ್ಸ್ ಸೇರಿ ನಾಲ್ವರು ಅರೆಸ್ಟ್ | Speed News Kannada

ದಾವಣಗೆರೆ: ಬೆಣ್ಣೆನಗರಿಯಲ್ಲಿ ಉದ್ಯಮಿಯೊಬ್ಬರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಹನಿಟ್ರಾಪ್ ಗ್ಯಾಂಗ್ ಒಂದನ್ನು ವಿದ್ಯಾನಗರ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕಷ್ಟದಲ್ಲಿದ್ದೇನೆ ಎಂದು ನಂಬಿಸಿ ಉದ್ಯಮಿಯನ್ನೇ ಬುಟ್ಟಿಗೆ ಹಾಕಿಕೊಂಡಿದ್ದ ಕಿಲಾಡಿ ಯುವತಿ ಹಾಗೂ ಆಕೆಯ ತಂಡ ಈಗ ಕಂಬಿ ಎಣಿಸುತ್ತಿದೆ.
ಘಟನೆಯ ಹಿನ್ನೆಲೆ:
ಬಂಧಿತರನ್ನು ಸುಶ್ಮಿತಾ (27), ಬೆಕ್ಕಿನಕಣ್ಣು ಕೃಷ್ಣ, ರಾಹುಲ್ ಮತ್ತು ಚನ್ನಬಸಪ್ಪ ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸುಷ್ಮತಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ನಗರದ 66 ವರ್ಷದ ಉದ್ಯಮಿಯೊಬ್ಬರಿಗೆ ತಾನು ಸಂಕಷ್ಟದಲ್ಲಿದ್ದೇನೆ ಎಂದು ಹೇಳಿಕೊಂಡು ಪರಿಚಯವಾಗಿದ್ದಳು. ಈ ಪರಿಚಯ ಸ್ನೇಹಕ್ಕೆ ತಿರುಗಿತ್ತು.
ವಿಡಿಯೋ ಮಾಡಿ ಬ್ಯಾಕ್‌ಮೇಲ್:
ತನ್ನ ತಂಡದೊಂದಿಗೆ ಒಳಸಂಚು ರೂಪಿಸಿದ್ದ ಸುಷ್ಮತಾ, ಉದ್ಯಮಿ ಸಿದ್ದವೀರಪ್ಪ ಬಡಾವಣೆಯ ಖಾಸಗಿ ಅಪಾರ್ಟ್‌ ಮೆಂಟ್‌ ನಲ್ಲಿರುವುದನ್ನು ತಿಳಿದು ಅಲ್ಲಿಗೆ ತಂಡದೊಂದಿಗೆ ನುಗ್ಗಿದ್ದಾಳೆ. ಅಲ್ಲಿ ಉದ್ಯಮಿಯ ವಿಡಿಯೋ ಚಿತ್ರೀಕರಿಸಿಕೊಂಡ ಆರೋಪಿಗಳು, ಬಳಿಕ ಅದನ್ನು ತೋರಿಸಿ ಹಣಕ್ಕಾಗಿ ಬ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾರೆ.  ₹25 ಲಕ್ಷಕ್ಕೆ ಬೇಡಿಕೆ:
"ನಾವು ಕೇಳಿದಷ್ಟು ಹಣ ನೀಡದಿದ್ದರೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಿಗೆ ನೀಡುತ್ತೇವೆ" ಎಂದು ಬೆದರಿಸಿದ ಗ್ಯಾಂಗ್, ಬರೋಬ್ಬರಿ 25 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದೆ. ಸಂತ್ರಸ್ತ ಉದ್ಯಮಿ ಅಂತಿಮವಾಗಿ 12 ಲಕ್ಷ ನೀಡಲು ಒಪ್ಪಿ ಅಲ್ಲಿಂದ ಬಂದಿದ್ದರು. ಆದರೆ ಆರೋಪಿಗಳು ಪದೇ ಪದೆ ಫೋನ್ ಮಾಡಿ ಪೀಡಿಸತೊಡಗಿದ್ದರು.
ಪೊಲೀಸ್ ಕಾರ್ಯಾಚರಣೆ:
ಒಂದು ಲಕ್ಷ ರೂಪಾಯಿ ಹಣದೊಂದಿಗೆ ಆಂಜನೇಯ ಬಡಾವಣೆಗೆ ಬರುವಂತೆ ಆರೋಪಿಗಳು ಉದ್ಯಮಿಗೆ ಸೂಚಿಸಿದ್ದರು. ಅಲ್ಲಿಗೆ ಹೋದಾಗ ಉದ್ಯಮಿಯ ಬಳಿಯಿದ್ದ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಎಸ್‌ಪಿ ಶೇಖರ್ ಹೆಚ್. ತೆಕ್ಕಣ್ಣನವರ್ ನೇತೃತ್ವದ ಪೊಲೀಸರು ನಾಲ್ವರನ್ನು ದಸ್ತಗಿರಿ ಮಾಡಿದ್ದಾರೆ.
ಸಾರ್ವಜನಿಕರಿಗೆ ಎಚ್ಚರಿಕೆ: ಅಪರಿಚಿತ ವ್ಯಕ್ತಿಗಳು "ಕಷ್ಟದಲ್ಲಿದ್ದೇವೆ" ಎಂದು ಸಾಮಾಜಿಕ ಜಾಲತಾಣ ಅಥವಾ ಇತರೆಡೆ ಪರಿಚಯ ಮಾಡಿಕೊಂಡಾಗ ಎಚ್ಚರದಿಂದಿರಲು ಪೊಲೀಸರು ಸೂಚಿಸಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.