2026-06-08 01:32:30

fuel save; work from home; sudgamurthy support pm modi opinion| ಇಂಧನ ಮಿತವ್ಯಯ, ವರ್ಕ್ ಫ್ರಂ ಹೋಮ್; ಪ್ರಧಾನಿ ಮೋದಿ ಹೇಳಿಕೆಗೆ ಸುಧಾ ಮೂರ್ತಿ ಬೆಂಬಲ| Speed News Kannada

fuel save; work from home; sudgamurthy support pm modi opinion| ಇಂಧನ ಮಿತವ್ಯಯ, ವರ್ಕ್ ಫ್ರಂ ಹೋಮ್; ಪ್ರಧಾನಿ ಮೋದಿ ಹೇಳಿಕೆಗೆ ಸುಧಾ ಮೂರ್ತಿ ಬೆಂಬಲ| Speed News Kannada

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಪೂರೈಕೆ ಅಡೆತಡೆಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಸಲಹೆಗಳು ರಾಷ್ಟ್ರದ ಹಿತಾಸಕ್ತಿಗೆ ಪೂರಕಗಿದ್ದು ಎಲ್ಲರೂ ಅನುಸರಿಸಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಹೇಳಿದ್ದಾರೆ.

ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇಂಧನ ಮಿತವ್ಯಯ ಮತ್ತು ಆನ್‌ ಲೈನ್‌ ಸಭೆಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಿದೆ. ಈ ಸಂಬಂಧ ಪ್ರಧಾನಿ ಮೋದಿ ಅವರು ನೀಡಿರುವ ಸಲಹೆಗಳನ್ನು ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಸುಧಾ ಮೂರ್ತಿ ಅವರ ಹೇಳಿಕೆಗೆ ಪರ ವಿರೋಧ ವ್ಯಕ್ತವಾಗುತ್ತಿದೆ.

ಮೊನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್‌, ಅನಿಲ, ಡೀಸೆಲ್‌ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಕಡಿಮೆಗೊಳಿಸಲು ಕರೆ ನೀಡಿದ್ದರು. ಹಾಗೆಯೇ ವರ್ಕ್ ಫ್ರಂ ಹೋಮ್, ವಿದೇಶಿ ಪ್ರವಾಸ ಕಡಿಮೆ ಮಾಡುವುದು ಮತ್ತು ಕನಿಷ್ಠ ಒಂದು ವರ್ಷದವರೆಗೆ ಚಿನ್ನವನ್ನು ಖರೀದಿಸದಂತೆ ಮನವಿ ಮಾಡಿಕೊಂಡಿದ್ದರು.

ಅವರ ಈ ಮನವಿಗೆ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ವ್ಯಾಪಕವಾಗಿ ಟೀಕಿಸಿದ್ದವು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.