ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಪೂರೈಕೆ ಅಡೆತಡೆಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಸಲಹೆಗಳು ರಾಷ್ಟ್ರದ ಹಿತಾಸಕ್ತಿಗೆ ಪೂರಕಗಿದ್ದು ಎಲ್ಲರೂ ಅನುಸರಿಸಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಹೇಳಿದ್ದಾರೆ.
ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇಂಧನ ಮಿತವ್ಯಯ ಮತ್ತು ಆನ್ ಲೈನ್ ಸಭೆಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಿದೆ. ಈ ಸಂಬಂಧ ಪ್ರಧಾನಿ ಮೋದಿ ಅವರು ನೀಡಿರುವ ಸಲಹೆಗಳನ್ನು ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಸುಧಾ ಮೂರ್ತಿ ಅವರ ಹೇಳಿಕೆಗೆ ಪರ ವಿರೋಧ ವ್ಯಕ್ತವಾಗುತ್ತಿದೆ.
ಮೊನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಅನಿಲ, ಡೀಸೆಲ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಕಡಿಮೆಗೊಳಿಸಲು ಕರೆ ನೀಡಿದ್ದರು. ಹಾಗೆಯೇ ವರ್ಕ್ ಫ್ರಂ ಹೋಮ್, ವಿದೇಶಿ ಪ್ರವಾಸ ಕಡಿಮೆ ಮಾಡುವುದು ಮತ್ತು ಕನಿಷ್ಠ ಒಂದು ವರ್ಷದವರೆಗೆ ಚಿನ್ನವನ್ನು ಖರೀದಿಸದಂತೆ ಮನವಿ ಮಾಡಿಕೊಂಡಿದ್ದರು.
ಅವರ ಈ ಮನವಿಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವ್ಯಾಪಕವಾಗಿ ಟೀಕಿಸಿದ್ದವು.