2026-07-15 02:19:45

G PARAMESHWAR | ಬಿಡದಿ ಟೌನ್‌ಶಿಪ್ ವಿವಾದ ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಪರಮೇಶ್ವರ್ | SNK

G PARAMESHWAR | ಬಿಡದಿ ಟೌನ್‌ಶಿಪ್ ವಿವಾದ ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಪರಮೇಶ್ವರ್ | SNK

ಬೆಂಗಳೂರು: ಬಿಡದಿ ಟೌನ್‌ಶಿಪ್ ಸರ್ವೆ ವೇಳೆ ಸಿಬ್ಬಂದಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ (Dcm) ಡಾ. ಜಿ. ಪರಮೇಶ್ವರ್  ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಹಕ್ಕೊತ್ತಾಯ ಮತ್ತು ಆಕ್ಷೇಪಣೆ ಸಲ್ಲಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಆದರೆ, ರಾಜಕೀಯ ಲಾಭಕ್ಕಾಗಿ ಕಾನೂನು ಕೈಗೆತ್ತಿಕೊಂಡು ಗದ್ದಲ ಸೃಷ್ಟಿಸಿದರೆ ಸರ್ಕಾರ ಸುಮ್ಮನಿರಲ್ಲ ಎಂದು ಎಚ್ಚರಿಸಿದ್ದಾರೆ.

ಈ ಯೋಜನೆಯ ಅಗತ್ಯತೆ ಹಾಗೂ ಇದರಿಂದ ಸ್ಥಳೀಯ ಜನರಿಗೆ ಆಗುವ ಅನುಕೂಲಗಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು. ಇದೇ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿದ ಅವರು, ಮುಂಬರುವ ಅಧಿವೇಶನದ ಒಳಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸಿ ಸುಮಾರು 20 ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಇದೇ ವೇಳೆ, ಪ್ರತಿಪಕ್ಷದ ಛಲವಾದಿ ನಾರಾಯಣಸ್ವಾಮಿ ಅವರ ಭ್ರಷ್ಟಾಚಾರದ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಬಿಜೆಪಿಯವರು ತಮ್ಮದೇ ಸಂಸ್ಕೃತಿಯನ್ನು ಆಡಳಿತ ಪಕ್ಷದ ಮೇಲೆ ಹೇರಲು ಯತ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ವಿವಾದಗಳ ನಡುವೆಯೂ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂಬುದು ಅವರ ಹೇಳಿಕೆಯ ಮುಖ್ಯ ಸಾರಾಂಶವಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.