2026-06-25 03:53:07

Gang Rape of a 5Year Old Girl | ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಅಪ್ರಾಪ್ತ ಬಾಲಕರಿಂದ 5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್! | SNK

Gang Rape of a 5Year Old Girl | ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಅಪ್ರಾಪ್ತ ಬಾಲಕರಿಂದ 5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್! | SNK

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಪಪಾಸ್ಪದ ಹಾಗೂ ಮಂ ಮನಕಲಕುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇವಲ 5 ವರ್ಷದ ಅಮಾಯಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘೋರ ಕೃತ್ಯ ಈಗ ಬಹಿರಂಗಗೊಂಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಹಿತಿಗಳ ಪ್ರಕಾರ, ಈ ಭೀಕರ ಅತ್ಯಾಚಾರ ಕೃತ್ಯವು ಸುಮಾರು ಮೂರು ವರ್ಷಗಳ ಹಿಂದೆ ನಡೆದಿತ್ತು. ಇಬ್ಬರು ಅಪ್ರಾಪ್ತ ವಯಸ್ಸಿನ ಹುಡುಗರು ಸೇರಿ ಈ ಅಮಾನವೀಯ ಕೃತ್ಯವನ್ನು ಎಸಗಿದ್ದರು. ಬಾಲಕಿ ಎಷ್ಟೇ ಕಿರುಚಾಡಿದರೂ, ಕಣ್ಣೀರಿಟ್ಟರೂ ಲೆಕ್ಕಿಸದ ದುರುಳರು ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅಷ್ಟೇ ಅಲ್ಲದೆ, ಈ ಇಡೀ ದುಷ್ಕೃತ್ಯವನ್ನು ಅಪ್ರಾಪ್ತರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದರು. ಕಳೆದ ಮೂರು ವರ್ಷಗಳಿಂದ ಯಾರಿಗೂ ತಿಳಿಯದಂತೆ ಮರೆಯಾಗಿದ್ದ ಈ ಘಟನೆ, ಇತ್ತೀಚೆಗೆ ಆ ಅತ್ಯಾಚಾರದ ವಿಡಿಯೋ ಕ್ಲಿಪ್ ಹೊರಬಂದ ಬಳಿಕವೇ ಬೆಳಕಿಗೆ ಬಂದಿದೆ. ವಿಡಿಯೋ ಸಾಮಾಜಿಕ ವಲಯದಲ್ಲಿ ಅಥವಾ ಪರಿಚಿತರ ಕೈಸೇರುತ್ತಿದ್ದಂತೆ ಇಡೀ ದುಷ್ಕೃತ್ಯದ ಸತ್ಯಾಸತ್ಯತೆ ತಡವಾಗಿ ಬಯಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾದ ಬಾಲಕಿಯ ಪೋಷಕರು ಪೊಲೀಸರ ಮೆಟ್ಟಿಲೇರಲು ಮುಂದಾಗಿದ್ದಾರೆ. ಆದರೆ ಈ ವೇಳೆ ಆರೋಪಿಗಳ ಕಡೆಯವರು ಪೊಲೀಸರಿಗೆ ದೂರು ನೀಡದಂತೆ ಬಾಲಕಿಯ ಪೋಷಕರಿಗೆ ತೀವ್ರ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ. ಸದ್ಯ ಬೆದರಿಕೆಗಳನ್ನೂ ಲೆಕ್ಕಿಸದೆ ಪೋಷಕರು ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.