ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಕೈಗೊಳ್ಳಬೇಕಾದ ಕೆಲಸಗಳನ್ನು ಕುರಿತು ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಓಕಳೀಪುರಂ ಅಷ್ಟಪಥ ಕಾರಿಡಾರ್ ಕಾಮಗಾರಿ; ಡಾ. ರಾಜ್‌ಕುಮಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಮೊದಲಾದ ಕಾಮಗಾರಿಗಳನ್ನು ಅವರು ವೀಕ್ಷಿಸಿದರು.
ಪರಿಶೀಲನೆ ವೇಳೆ ಆಯುಕ್ತರಾದ ರಾಜೇಂದ್ರ ಚೋಳನ್, ಡಾ. ರಾಜೇಂದ್ರ ಕೆ.ವಿ., ಬೆಂ.ಘ.ನಿ. ನಿಯಮಿತದ ಸಿಇಒ ಕರೀಗೌಡ, ಅಪರ ಆಯುಕ್ತರಾದ ವೆಂಕಟ ಚಲಪತಿ, ಮುಖ್ಯ ಅಭಿಯಂತರರು ಹಾಗೂ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು
ಓಕಳೀಪುರಂ ಅಷ್ಟಪಥ ಕಾರಿಡಾರ್ ಕಾಮಗಾರಿ
▪️ ಚೆನ್ನೈ ರೈಲ್ವೆ ಹಳಿ ಕೆಳಭಾಗದಲ್ಲಿ ಬಾಕಿ ಇರುವ ಸಂಪರ್ಕ ರಸ್ತೆ ಕಾಮಗಾರಿಯನ್ನು 25 ದಿನಗಳಲ್ಲಿ ಪೂರ್ಣಗೊಳಿಸಲು ಸೂಚನೆ.
▪️ ಮೆಜೆಸ್ಟಿಕ್‌ನಿಂದ ರಾಜಾಜಿನಗರದ ಮಾರ್ಗದ ಬಾಕ್ಸ್ ಭಾಗದಲ್ಲಿ ವಾಹನ ಸಂಚಾರಕ್ಕೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವೇಗ.
▪️ ರೈಲ್ವೆ ನಿಲ್ದಾಣದ ಕಡೆಗೆ ಸಂಪರ್ಕ ರಸ್ತೆ, 1200 ಮಿ.ಮೀ. ವ್ಯಾಸದ ಮಳೆನೀರುಗಾಲುವೆ,
63 ಮೀಟರ್ ರಿಟೈನಿಂಗ್ ವಾಲ್ ಹಾಗೂ ಪಾದಚಾರಿ ಮಾರ್ಗ ನಿರ್ಮಾಣ ಕಾರ್ಯ ತ್ವರಿತಗೊಳಿಸಲು ಸೂಚನೆ.
▪️ ಹೊಸ ಪಾದಚಾರಿ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭಿಸಿ ವೇಗವಾಗಿ ಪೂರ್ಣಗೊಳಿಸಲು ನಿರ್ದೇಶನ.
ಮಾದವನಗರ ರೈಲ್ವೆ ಕೆಳಸೇತುವೆ ಪರಿಶೀಲನೆ
▪️ ಮಳೆನೀರು ಸರಾಗ ಹರಿವಿಗಾಗಿ ಗ್ರೇಟಿಂಗ್‌ಗಳನ್ನು ಸದಾ ಸ್ವಚ್ಛವಾಗಿರಿಸಲು ಸೂಚನೆ.
▪️ ಚರಂಡಿಗಳ ಹೂಳೆತ್ತುವ ಕಾರ್ಯ ಕೈಗೊಂಡು ನೀರು ನಿಲ್ಲದಂತೆ ಮುಂಜಾಗ್ರತಾ ಕ್ರಮಕ್ಕೆ ಒತ್ತು.
▪️ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ.
▪️ ಪಾದಚಾರಿ ಮಾರ್ಗದ ಮೇಲಿನ ಮರದ ಅವಶೇಷ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು ತಕ್ಷಣ ತೆರವುಗೊಳಿಸಲು ನಿರ್ದೇಶನ.
▪️ ರಸ್ತೆಗೆ ವಾಲಿರುವ ಮರದ ಕೊಂಬೆಗಳನ್ನು ಕತ್ತರಿಸಿ ವಾಹನ ಸಂಚಾರ ಸುಗಮಗೊಳಿಸಲು ಸೂಚನೆ.
▪️ ಕಾಮಗಾರಿ ಬಳಿಕ ರಸ್ತೆ ಪುನಶ್ಚೇತನ ಕಾರ್ಯವನ್ನು ಗುಣಮಟ್ಟದೊಂದಿಗೆ ಕಡ್ಡಾಯವಾಗಿ ನಿರ್ವಹಿಸಲು ಎಲ್ಲಾ ಇಲಾಖೆಗೆ ನಿರ್ದೇಶನ.
ಡಾ. ರಾಜ್‌ಕುಮಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ
▪️ ನವರಂಗ್‌ನಿಂದ ಸ್ಟಾರ್ ಬಜಾರ್ ಸಿಗ್ನಲ್‌ವರೆಗೆ 1.8 ಕಿ.ಮೀ. ಉದ್ದದ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ.
▪️ ಪ್ರಸ್ತುತ ನಡೆಯುತ್ತಿರುವ ಒಂದು ಬದಿಯ ಕಾಮಗಾರಿ ಜುಲೈ ಅಂತ್ಯದೊಳಗೆ ಪೂರ್ಣ.
▪️ ಉಳಿದ ಭಾಗದ ಕಾಮಗಾರಿ ಕೈಗೆತ್ತಿಕೊಂಡು ಅಕ್ಟೋಬರ್ ಅಂತ್ಯದೊಳಗೆ ಸಂಪೂರ್ಣ ಪೂರ್ಣಗೊಳಿಸಲು ಸೂಚನೆ.
ಮಲ್ಲೇಶ್ವರಂ ಹಾಗೂ ಚಿತ್ರಾಪುರ ರಸ್ತೆ ಅಭಿವೃದ್ಧಿ
▪️ ಮಲ್ಲೇಶ್ವರಂ 8ನೇ ಮುಖ್ಯ ರಸ್ತೆಯ 800 ಮೀ. ಉದ್ದದ ವೈಟ್ ಟಾಪಿಂಗ್ ಕಾಮಗಾರಿ ಶೇ.60 ಪೂರ್ಣ.
▪️ ಸೈಡ್ ಡ್ರೇನ್ ಹಾಗೂ ಪಾದಚಾರಿ ಮಾರ್ಗ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ.
▪️ ಚಿತ್ರಾಪುರ ಕ್ರಾಸ್‌ನಿಂದ 18ನೇ ಅಡ್ಡರಸ್ತೆಯವರೆಗೆ 425 ಮೀ. ಉದ್ದದ ವೈಟ್ ಟಾಪಿಂಗ್ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದೆ.
▪️ ಪೂರ್ಣಗೊಂಡ ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ಸೂಚನೆ.