2026-04-23 09:18:01

GBA publishes final voter list | ಅಂತಿಮ ಮತದಾರರ ಪಟ್ಟಿ ಪ್ರಕಟ ಮಾಡಿದ GBA | Speed news kannada

GBA publishes final voter list | ಅಂತಿಮ ಮತದಾರರ ಪಟ್ಟಿ ಪ್ರಕಟ ಮಾಡಿದ GBA | Speed news kannada

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ನಡೆಯಲಿರುವ ಬೆಂಗಳೂರು ನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ GBA ತನ್ನ ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ ಪ್ರಕಟಮಾಡಿದೆ. ಈ ಬಾರಿಯ GBA ಚುನಾವಣೆಯಲ್ಲಿ  ಒಟ್ಟು 88,95,361 ಮತದಾರರಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್‌ ಅವರು ತಿಳಿಸಿದ್ದಾರೆ.

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 9 ರಂದು ಕರಡು ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅದರ ನಂತರ ತಿದ್ದುಪಡಿ ಮತ್ತು ಪರಿಶೀಲನೆ ಪೂರ್ಣಗೊಂಡು ಈಗ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನ ಒಟ್ಟು 369 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಈ ಪಟ್ಟಿ ಸಿದ್ಧಪಡಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 45,71,169 ಪುರುಷ ಮತದಾರರು, 43,22,557 ಮಹಿಳಾ ಮತದಾರರು ಹಾಗೂ 1,635 ಇತರ ಮತದಾರರು ಸೇರಿದ್ದಾರೆ ಎಂದು ತಿಳಿಸಿದರು. ಚುನಾವಣೆಗೆ ಒಟ್ಟು 8,023 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದೂ ಮಾಹಿತಿ ನೀಡಿದರು.

ಒಟ್ಟು 369 ವಾರ್ಡ್‌ಗಳಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 51-ಸುಬ್ರಹ್ಮಣ್ಯಪುರ ಅತಿ ಹೆಚ್ಚು (53,660) ಮತದಾರರನ್ನು ಹೊಂದಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 24-ವಿಜ್ಞಾನನಗರ ಅತಿ ಕಡಿಮೆ (12,897) ಮತದಾರರನ್ನು ಹೊಂದಿರುತ್ತದೆ. ಅಂತಿಮ ಮತದಾರರ ಪಟ್ಟಿಯಲ್ಲಿ 2,833 ಮತದಾರರು ಹೆಚ್ಚಾಗಿದ್ದಾರೆ ಎಂದು ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.