2026-07-23 07:26:00

GBA | ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ, ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ | Speed news kannada

GBA | ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ, ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ | Speed news kannada

ಬೆಂಗಳೂರು ಮಹಾಜನತೆಗೆ ಶುಕ್ರವಾರ ಹಾಗೂ ಶನಿವಾರ ಮಹತ್ವದ ದಿನ ಅಂತಾನೇ ಹೇಳಬಹುದು. ಏಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ  ಅಡಿಯಲ್ಲಿ 5 ನಗರ ಪಾಲಿಕೆಗಳ 2026-27ರ ಸಾಲಿನ ಆಯವ್ಯಯ ಮಂಡನೆಯಾಗಿದೆ. ಒಟ್ಟಾರೆಯಾಗಿ ಬೆಂಗಳೂರಿಗೆ 20 ಸಾವಿರ ಕೋಟಿ ರೂ ಮೀಸಲಿಡಲಾಗಿದೆ.

ಬಿಬಿಎಂಪಿ ಇತಿಹಾಸದ ಪುಟಗಳನ್ನ ಸೇರಿದ ಬಳಿಕ ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಇದಾದ ಬಳಿಕ ಎಲ್ಲಾ ನಗರ ಪಾಲಿಕೆಗಳ ಚೊಚ್ಚಲ ಬಜೆಟ್​ಗೆ ಬೆಂಗಳೂರಿಗರು ಸಾಕ್ಷಿಯಾಗಿದ್ದಾರೆ. ಶುಕ್ರವಾರ 3,889 ಕೋಟಿ ರೂಪಾಯಿಗಳ ಪೂರ್ವ ನಗರ ಪಾಲಿಕೆ ಬಜೆಟ್ ಹಾಗೂ 3,426 ಕೋಟಿ ರೂಪಾಯಿಗಳ ಕೇಂದ್ರ ನಗರ ಪಾಲಿಕೆ ಬಜೆಟ್ ಮಂಡಿಸಲಾಗಿತ್ತು. ಇಂದು ಉಳಿದ ಉತ್ತರ, ಪಶ್ಚಿಮ ಹಾಗೂ ದಕ್ಷಿಣ ನಗರ ಪಾಲಿಕೆಗಳ ಬಜೆಟ್ ಮಂಡಿಸಲಾಗಿದೆ. 5 ಪಾಲಿಕೆಗಳ ಒಟ್ಟಾರೆ ಬಜೆಟ್ ಮೌಲ್ಯ ಬರೋಬ್ಬರಿ 20,213 ಕೋಟಿ ರೂಪಾಯಿ ಆಗಿದೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.