2026-06-08 04:29:08

Girl dies after wall collapses due to heavy rain | ಭಾರೀ ಮಳೆಗೆ ಗೋಡೆ ಕುಸಿತ ಬಾಲಕಿ ಸಾ*ವು | Speed News Kannada

Girl dies after wall collapses due to heavy rain | ಭಾರೀ ಮಳೆಗೆ ಗೋಡೆ ಕುಸಿತ ಬಾಲಕಿ ಸಾ*ವು | Speed News Kannada

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಗೋಡೆ ಕುಸಿದು ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಸಂಪೂರ್ಣವಾಗಿ ನೆನೆದು ದುರ್ಬಲಗೊಂಡು ಕುಸಿದಿರುವುದು ಈ ದುರಂತಕ್ಕೆ ಕಾರಣವಾಗಿದೆ. ಸಿದ್ದಪ್ಪ ಅವರಿಗೆ ಸೇರಿದ ಅಡುಗೆ ಮನೆಯ ಗೋಡೆ ಕುಸಿದು ಅಕ್ಷತಾ (8) ಮೃತಪಟ್ಟಿದ್ದಾಳೆ. ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆ ಗೋಡೆ ಕುಸಿದಿದೆ. ಈ ವೇಳೆ ಬಾಲಕಿ ಅಕ್ಷತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಿಂದಾಗಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಮೃತ ಬಾಲಕಿಯ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ಹಳೆಯ ಮನೆಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಳೆಯ ಕಟ್ಟಡ ಹಾಗೂ ದುರ್ಬಲ ಗೋಡೆಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಳೆಯ ಅಬ್ಬರಕ್ಕೆ ಹಾನಿಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.