2026-07-23 06:30:46

Global oil prices rise due to West Asian conflict|ಪಶ್ಚಿಮ ಏಷ್ಯಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಬೆಲೆ ಏರಿಕೆ |Speed News Kannada

Global oil prices rise due to West Asian conflict|ಪಶ್ಚಿಮ ಏಷ್ಯಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಬೆಲೆ ಏರಿಕೆ |Speed News Kannada

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಪರಿಣಾಮ ಜಾಗತಿಕ ತೈಲ ಬೆಲೆ ಭಾರೀ ಏರಿಕೆಯಾಗಿದೆ. ಇದರ ನೇರ ಪರಿಣಾಮವಾಗಿ ಭಾರತದಲ್ಲೂ ಕಮರ್ಷಿಯಲ್ LPG ಸಿಲಿಂಡರ್ ದರದಲ್ಲಿ ಏರಿಕೆ ಕಂಡುಬಂದಿದೆ. ಹೌದು, ಇಂದಿನಿಂದ ಅಂದರೆ ಏಪ್ರಿಲ್ 1ರಿಂದ ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ₹195.50 ಹೆಚ್ಚಳವಾಗಿದೆ. ಇದಕ್ಕೂ ಮೊದಲು ಮಾರ್ಚ್ 1ರಂದು 19 ಕೆಜಿ ಸಿಲಿಂಡರ್ ದರ ₹114.50 ಏರಿಕೆಯಾಗಿತ್ತು. ಹೀಗಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ಮತ್ತೊಂದು ಹೊರೆ ಬಿದ್ದಂತಾಗಿದೆ.


ಪಶ್ಚಿಮ ಏಷ್ಯಾದ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಸುಮಾರು 50 ಶೇಕಡಾ ಏರಿಕೆಯಾಗಿದೆ. ಇದರಿಂದ ಭಾರತಕ್ಕೆ ಇಂಧನ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿ, LPG ಕೊರತೆ ಎದುರಾಗಿದೆ.ಪ್ರತಿ ತಿಂಗಳ ಮೊದಲ ದಿನ ಅಂತಾರಾಷ್ಟ್ರೀಯ ಮಾನದಂಡಗಳು ಹಾಗೂ ವಿನಿಮಯ ದರ ಆಧರಿಸಿ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡುತ್ತವೆ. ಅದರಂತೆ, ಇಂದಿನಿಂದ ಕಮರ್ಷಿಯಲ್ ಸಿಲಿಂಡರ್ ಹೊಸ ದರಗಳು ಜಾರಿಗೆ ಬಂದಿವೆ. ದೆಹಲಿ – ₹2078.50, ಕೊಲ್ಕತ್ತಾ – ₹2208.00, ಮುಂಬೈ – ₹2031.00. ಚೆನ್ನೈ – ₹2246.50.

ಇನ್ನು ಗೃಹ ಬಳಕೆಯ LPG ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮಾರ್ಚ್ 7ರಂದು ₹60 ಏರಿಕೆಯಾದ ನಂತರ ದರ ಸ್ಥಿರವಾಗಿದೆ.ಇರಾನ್‌ನ ಸುಪ್ರೀಂ ಲೀಡರ್ ಅಲಿ ಖಮೇನಿ ಸಾವಿನ ನಂತರ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ. ಹೋರ್ಮುಜ್ ಸಮುದ್ರ ಮಾರ್ಗದಲ್ಲಿ ತೈಲ ಸಾಗಾಟಕ್ಕೂ ಅಡಚಣೆ ಉಂಟಾಗಿದೆ. ಜಾಗತಿಕ ಇಂಧನ ಮಾರುಕಟ್ಟೆ ಮತ್ತು ಆರ್ಥಿಕತೆಗೆ ದೊಡ್ಡ ಹೊಡೆತ ಬಿದ್ದಿದೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆ ಸಾಧ್ಯತೆ ಇದೆ.

 

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.