2026-04-23 08:58:31

Gold and Silver Rate|ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ.. ಗ್ರಾಹಕರು ಫುಲ್‌ ಖುಷ್!|Speed news kannada

Gold and Silver Rate|ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ.. ಗ್ರಾಹಕರು ಫುಲ್‌ ಖುಷ್!|Speed news kannada

ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಗ್ಯಾಸ್‌, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ನಡುವೆ ಚಿನ್ನ, ಬೆಳ್ಳಿ ದರ ಇಳಿಕೆಯಾಗಿದೆ. ಮದುವೆ ಸೀಸನ್‌ ಹೊತ್ತಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗಿರುವುದು ಆಭರಣ ಪ್ರಿಯರಿಗೆ ಖುಷಿ ತಂದಿದೆ.  ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳು ಮತ್ತು ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಭೀತಿಯ ನಡುವೆ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಕುಸಿದಿರುವುದು ಆಭರಣ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್, 22 ಕ್ಯಾರೆಟ್ ಮತ್ತು 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ದೊಡ್ಡ ಮಟ್ಟದ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನ ಪ್ರತಿ ಗ್ರಾಂ.ಗೆ ರೂ. 1,032 ಇಳಿಕೆಯಾಗಿದ್ದು, ಪ್ರಸ್ತುತ ರೂ. 13,565 ತಲುಪಿದೆ. 22 ಕ್ಯಾರೆಟ್ ಚಿನ್ನ ಪ್ರತಿ ಗ್ರಾಂಗೆ ರೂ. 945 ಇಳಿಕೆಯಾಗಿದ್ದು, ಈಗ ರೂ. 12,435 ಆಗಿದೆ. ಇನ್ನು, 18 ಕ್ಯಾರೆಟ್ ಚಿನ್ನ ಪ್ರತಿ ಗ್ರಾಂ.ಗೆ ರೂ. 774 ಕುಸಿದಿದ್ದು, ಈಗ 10,174 ಆಗಿದೆ. ಮಾರ್ಚ್ ತಿಂಗಳು ಶುರುವಾದಾಗಿನಿಂದ ಚಿನ್ನದ ರೇಟ್ ಕೇಳಿದ್ರೆ ತಲೆ ತಿರುಗುವಂತಿತ್ತು. ಆದ್ರೆ, ಕೇವಲ 23 ದಿನಗಳ ಗ್ಯಾಪ್‌ನಲ್ಲಿ ಬಂಗಾರದ ಬೆಲೆಯಲ್ಲಿ ಬರೋಬ್ಬರಿ 34,000 ರೂಪಾಯಿಗಳಷ್ಟು ಕುಸಿತವಾಗಿದೆ. ಮುಂದಿನ ದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಮತ್ತಷ್ಟು ಇಳಿಯುವ ಸಾಧ್ಯತೆಯಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.