2026-03-07 07:24:52

Gold jewellery stolen in Constables house | ಪೊಲೀಸರನ್ನು ಬಿಡದ ಕಳ್ಳರು ಬೆಂಗಳೂರಲ್ಲಿ ಕಾನ್ಸೆಬಲ್ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ | Speed News Kannada

Gold jewellery stolen in Constables house | ಪೊಲೀಸರನ್ನು ಬಿಡದ ಕಳ್ಳರು ಬೆಂಗಳೂರಲ್ಲಿ ಕಾನ್ಸೆಬಲ್ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ | Speed News Kannada

ಬೆಂಗಳೂರು : ಸಾಮಾನ್ಯವಾಗಿ ಜನರ ಮನೆಗೆ ನುಗ್ಗಿ ಚಿನ್ನಾಭರಣ ಅನ್ನೋದು ಕರಿಯುತ್ತಿದ್ದ ಕಳ್ಳರು ಇದೀಗ ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು ಬೆಂಗಳೂರು ನಗರದ ಜಾಲಹಳ್ಳಿ ಹೆಚ್‌ ಎಟಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ಶ್ರೀಧ‌ರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀಧ‌ರ್ ಎಂಬುವವರು ಕಾನ್‌ಸ್ಟೇಬಲ್ ಆಗಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀಧ‌ರ್ ಅವರ ಪತ್ನಿ ಕುಟುಂಬಸ್ಥರು ಮುರುಗೇಶ್ ಪಾಳ್ಯದಲ್ಲಿ ವಾಸವಾಗಿದ್ದರು.
ಈ ಹಿನ್ನೆಲೆ ಶ್ರೀಧ‌ರ್ ಹಾಗೂ ಅವರ ಪತ್ನಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಜಾಲಹಳ್ಳಿಯಲ್ಲಿರುವ ಕ್ಯಾಟರ್ಸ್ನಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ ನೆಕ್ಸೆಸ್, ಕಿವಿ ಓಲೆ, ಬೆಳ್ಳಿ ಹಾಗೂ ರೇಷ್ಮೆ ಸೀರೆ ಕಳ್ಳತನವಾಗಿದ್ದು, ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.