2026-07-23 09:39:34

Gold Lovers Riot Over Gold Prices! | ಚಿನ್ನದ ಬೆಲೆಗೆ ದಂಗಾದ ಬಂಗಾರಪ್ರಿಯರು! | Speed News Kannada

Gold Lovers Riot Over Gold Prices! | ಚಿನ್ನದ ಬೆಲೆಗೆ ದಂಗಾದ ಬಂಗಾರಪ್ರಿಯರು! | Speed News Kannada

ಬೆಂಗಳೂರು : ಕಳೆದ ಕೆಲ ತಿಂಗಳುಗಳಿಂದ ಭಾರತೀಯ ಚಿಲ್ಲರೆ ಮಾರುಕಟ್ಟೆಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳು ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿದ್ದವು. ಹಾಗೂ ಹೀಗೂ ಮಾಡಿ, ಕೈಸಾಲವೋ ಅಥವಾ ಬ್ಯಾಂಕ್ ಸಾಲವೋ ಪಡೆದು ಶುಭ ಸಮಾರಂಭಗಳಿಗೆ ಚಿನ್ನ ಬೆಳ್ಳಿ ಕೊಳ್ಳುತ್ತಿದ್ದ ಮಧ್ಯಮ ವರ್ಗದ ಜನರಂತೂ ಈ ತೀವ್ರ ಏರಿಕೆಯಿಂದಾಗಿ ಕಂಗೆಟ್ಟು ಹೋಗಿದ್ದರೆ.
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 1,47,150 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 1,49,000, ರೂ. 1,47,150, ರೂ.  1,47,150 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 1,47,300 ರೂ. ಆಗಿದೆ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 12,040 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 14,715 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 16,053 ಆಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.