2026-06-08 01:19:58

gold silver import duty hiked to 15percent; anxiety development| ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಶೇ.15ಕ್ಕೆ ಹೆಚ್ಚಳ; ಆತಂಕ ಮೂಡಿಸಿದ ಬೆಳವಣಿಗೆ| Speed News Kannada

gold silver import duty hiked to 15percent; anxiety development| ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಶೇ.15ಕ್ಕೆ ಹೆಚ್ಚಳ; ಆತಂಕ ಮೂಡಿಸಿದ ಬೆಳವಣಿಗೆ| Speed News Kannada

 

ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮ ಆಮದು ಸುಂಕ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರರ್ಕಾರ ಇಂದು ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು ಶೇ.6 ರಿಂದ ಶೇ.15ಕ್ಕೆ ಹೆಚ್ಚಿಸಿದೆ. ನೂತನ ದರವು ಇಂದಿನಿಂದಲೇ ಜಾರಿಗೆ ಬರಲಿದೆ. ಚಿನ್ನದ ಖರೀದಿ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ಮೂರು ದಿನಗಳಲ್ಲೇ ಆಮದು ಸುಂಕವನ್ನು ಹೆಚ್ಚಿಸಲಾಗಿದೆ.

ವಿದೇಶಿ ವಿನಿಮಯ ಉಳಿಸಲು ಈ ಕ್ರಮ ಅನಿವಾರ್ಯ ಎನ್ನಲಾಗುತ್ತಿದೆ. ದೇಶದ ವಿದೇಶಿ ವಿನಿಮಯ ಮೀಸಲುಗಳ ಮೇಲಿನ ಒತ್ತಡ ಕಡಿಮೆ ಮಾಡುವ ಪ್ರಯತ್ನಗಳ ಭಾಗವಾಗಿ, ಸೋಶಿಯಲ್ ವೆಲ್‌ಫೇರ್ ಸರ್ಚಾರ್ಜ್ (ಎಸ್‌ಡಬ್ಲ್ಯುಎಸ್‌) ಹಾಗೂ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್‌ (ಎಐಡಿಸಿ) ಪರಿಷ್ಕರಿಸಲಾಗಿದ್ದು, ಈ ಹೊಸ ದರವು ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಆಭರಣ ಚಿನ್ನದ ಬೆಲೆಯಲ್ಲಿ ಒಂದು ಗ್ರಾಂಗೆ ರೂ. 1,275 ರೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ರೂ. 20 ಹೆಚ್ಚಳ ಕಂಡಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಕಡಿಮೆ ಇದ್ದರೂ ಭಾರತದಲ್ಲಿ ಆಮದು ಸಂಕ ಹೆಚ್ಚಳದಿಂದಾಗಿ ಬೆಲೆಗಳು ಭಾರೀ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ ರೂ. 16,789 ಆಗಿದ್ದರೆ 22 ಕ್ಯಾರಟ್  ನ 1 ಗ್ರಾಂ ಚಿನ್ನದ ಬೆಲೆ 15,390 ರೂ ಆಗಿದೆ. ಇನ್ನು ಬೆಳ್ಳಿ ಬೆಲೆ 1 ಗ್ರಾಂಗೆ 310 ರೂಗೆ ಮಾರಾಟವಾಗುತ್ತಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.