ರಾಜ್ಯದ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ದೊರೆತಿದೆ. ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡ ರೈಲ್ವೇ ಮಂಡಳಿ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ರೈಲ್ವೆ ಇಲಾಖೆ ಖಾಯಂ ಸೇವೆಗೆ ಪರಿರ್ತಿಸಿದೆ. ವಿಶೇಷ ರೈಲುಗಳಾಗಿ ಓಡುತ್ತಿದ್ದ ಸೇವೆಗಳು ಸಾಮಾನ್ಯವಾಗಿ ಹೆಚ್ಚಿನ ದರ ಹಾಗೂ ಅನಿಶ್ಚಿತ ವೇಳಾಪಟ್ಟಿಯಲ್ಲಿ ಪ್ರಯಾಣಿಸುತ್ತಿದ್ದರಿಂದ ಪ್ರಯಾಣಿಕರಿಗೆ ಪ್ರಯಾಣ ಬೆಳೆಸಲು ಕಷ್ಟವಾಗುತ್ತಿತ್ತು. ಅದಕ್ಕಾಗಿಯೇ ಈಗ ಖಾಯಂ ಸೇವೆಗೆ ರೈಲುಗಳನ್ನು ಪರಿವರ್ತನೆ ಮಾಡಲಾಗಿದೆ. ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಲಿದ್ದು, ಇದರಲ್ಲಿ 6 ಎಕ್ಸ್‌ಪ್ರೆಸ್, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳನ್ನು ಖಾಯಂ ಸೇವೆಗೆ ಒಳಪಡಿಸಲಾಗಿದೆ. ಈ ನಿರ್ಧಾರದಿಂದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳ ಜನರಿಗೆ ಪ್ರಯಾಣ ಸೌಲಭ್ಯ ಹೆಚ್ಚಾಗಲಿದೆ.