2026-04-23 11:01:07

Good news for Karnataka Railway passengers!19 trains ready for regular service|ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್! 19 ರೈಲುಗಳ ಖಾಯಂ ಸೇವೆ ಸಿದ್ದತೆ|Speed news kannada

Good news for Karnataka Railway passengers!19 trains ready for regular service|ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್! 19 ರೈಲುಗಳ ಖಾಯಂ ಸೇವೆ ಸಿದ್ದತೆ|Speed news kannada

ರಾಜ್ಯದ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ದೊರೆತಿದೆ. ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡ ರೈಲ್ವೇ ಮಂಡಳಿ  ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ರೈಲ್ವೆ ಇಲಾಖೆ ಖಾಯಂ ಸೇವೆಗೆ ಪರಿರ್ತಿಸಿದೆ. ವಿಶೇಷ ರೈಲುಗಳಾಗಿ ಓಡುತ್ತಿದ್ದ ಸೇವೆಗಳು ಸಾಮಾನ್ಯವಾಗಿ ಹೆಚ್ಚಿನ ದರ ಹಾಗೂ ಅನಿಶ್ಚಿತ ವೇಳಾಪಟ್ಟಿಯಲ್ಲಿ ಪ್ರಯಾಣಿಸುತ್ತಿದ್ದರಿಂದ ಪ್ರಯಾಣಿಕರಿಗೆ ಪ್ರಯಾಣ ಬೆಳೆಸಲು ಕಷ್ಟವಾಗುತ್ತಿತ್ತು. ಅದಕ್ಕಾಗಿಯೇ ಈಗ ಖಾಯಂ ಸೇವೆಗೆ ರೈಲುಗಳನ್ನು ಪರಿವರ್ತನೆ ಮಾಡಲಾಗಿದೆ. ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಲಿದ್ದು, ಇದರಲ್ಲಿ 6 ಎಕ್ಸ್‌ಪ್ರೆಸ್, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳನ್ನು ಖಾಯಂ ಸೇವೆಗೆ ಒಳಪಡಿಸಲಾಗಿದೆ. ಈ ನಿರ್ಧಾರದಿಂದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳ ಜನರಿಗೆ ಪ್ರಯಾಣ ಸೌಲಭ್ಯ ಹೆಚ್ಚಾಗಲಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.