ಬೆಂಗಳೂರು: ನಾಡಿದ್ದು, ಮುಂದಿನ ಸೋಮವಾರದಿಂದ ಜಾರಿಗೆ ಬರಬೇಕಿದ್ದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸಂಬಂಧ ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಕಟ್ಟರ್ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ ಪ್ರಯಾಣಿಕರಿಗೆ ಆಗುವ ತೊಂದರೆಯನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ. ಮೆಟ್ರೋ ದರ ಏರಿಕೆಯ ವಿರುದ್ಧ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದೇನೆ ಎಂದಿದ್ದಾರೆ.
ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಈ ಪ್ರಯಾಣ ದರ ಏರಿಕೆ ಸೋಮವಾರದಿಂದ ಜಾರಿಗೆ ಬರುವುದಿಲ್ಲ.
ದರ ನಿಗದಿ ಸಮಿತಿ( FFC) ಯಲ್ಲಿನ ವೈಪರೀತ್ಯಗಳನ್ನು ಕುರಿತೂ ಅವರು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಮತ್ತು ರಾಜ್ಯ ಸರ್ಕಾರ ಕೋರಿದರೆ ದರ ನಿಗದಿ ಸಮಿತಿಯನ್ನು ಹೊರಚಿಸಬಹುದು ಎಂದೂ ತಿಳಿಸಿದ್ದಾರೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.