2026-04-24 02:54:20

Good news for passengers Special flight between Kuwait and Mangalore | ಪ್ರಯಾಣಿಕರಿಗೆ ಗುಡ್ ನ್ಯೂಸ್ ಕುವೈತ್ ಮಂಗಳೂರು ನಡುವೆ ಏಪ್ರಿಲ್ 8ರಿಂದ ವಿಶೇಷ ವಿಮಾನ ಯಾನ ಆರಂಭ | Speed News Kannada

Good news for passengers Special flight between Kuwait and Mangalore | ಪ್ರಯಾಣಿಕರಿಗೆ ಗುಡ್ ನ್ಯೂಸ್ ಕುವೈತ್ ಮಂಗಳೂರು ನಡುವೆ ಏಪ್ರಿಲ್ 8ರಿಂದ ವಿಶೇಷ ವಿಮಾನ ಯಾನ ಆರಂಭ | Speed News Kannada

ಮಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್. ಜಜೀರಾ ಏರ್ ವೇಸ್ ಏಪ್ರಿಲ್ 8ರಿಂದ ಮಂಗಳೂರು-ಕುವೈತ್ ನಡುವೆ ವಿಶೇಷ ವಿಮಾನ ಯಾನ ಆರಂಭಿಸಲಿದೆ ಎಂದು ತಿಳಿಸಿದೆ. ಇದರಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ಕರಾವಳಿ ಭಾಗದ ಜನರಿಗೆ ಹಾಗೂ ದಕ್ಷಿಣ ಭಾರತದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್ ಮತ್ತು ಮಂಗಳೂರು ನಡುವೆ ವಾರಕ್ಕೆ ಎರಡು ಬಾರಿ ವಿಶೇಷ ವಿಮಾನಯಾನ ಸೇವೆ ಆರಂಭವಾಗಲಿದೆ. ಜಜೀರಾ ಏರ್‌ವೇಸ್ ಭಾರತದ ನಾಲ್ಕು ಪ್ರಮುಖ ನಗರಗಳಾದ ಮಂಗಳೂರು, ಕೋಝಿಕ್ಕೋಡ್ (ಕ್ಯಾಲಿಕಟ್), ತಿರುಚಿರಾಪಳ್ಳಿ ಮತ್ತು ಕಣ್ಣೂರಿಗೆ ದಮ್ಮಮ್ ವಿಮಾನ ನಿಲ್ದಾಣದ ಮೂಲಕ ಹೊಸ ವಿಮಾನ ಸೇವೆಗಳನ್ನು ಘೋಷಿಸಿದೆ. ಮಂಗಳೂರಿಗೆ ಏಪ್ರಿಲ್ 9ರಿಂದ ಪ್ರತಿ ಸೋಮವಾರ ಮತ್ತು ಗುರುವಾರ ವಿಮಾನಗಳು ಸಂಚರಿಸಲಿವೆ.
ವಿಮಾನ ಜೆ9 3417 ಕುವೈತ್‌ನಿಂದ ಸ್ಥಳೀಯ ಕಾಲಮಾನ ಬೆಳಿಗ್ಗೆ 8:40ಕ್ಕೆ ಹೊರಟು, ದಮ್ಮಮ್ ಮೂಲಕ ಸಂಜೆ 4:10ಕ್ಕೆ ಮಂಗಳೂರು ತಲುಪಲಿದೆ. ಹಿಂದಿರುಗುವ ವಿಮಾನ ಜೆ9 3418 ಮಂಗಳೂರಿನಿಂದ ಸಂಜೆ 4.55ಕ್ಕೆ ಹೊರಟು, ಸ್ಥಳೀಯ ಕಾಲಮಾನ ರಾತ್ರಿ 7.40ಕ್ಕೆ ಕುವೈತ್ ತಲುಪಲಿದೆ. ಇಡೀ ಪ್ರಯಾಣದ ಅವಧಿ ಸುಮಾರು 6 ಗಂಟೆಗಳು ಇಲಿದೆ. ಕೋವಿಡ್ ಸಮಯದಲ್ಲಿ ಮಂಗಳೂರಿಗೆ ವಿಶೇಷ ವಿಮಾನಗಳ ಸೇವೆ ಒದಗಿಸಿದ್ದ ಜಜೀರಾ ಏರ್‌ವೇಸ್, ಈಗ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಸೇವೆ ಪುನರಾರಂಭಿಸಲು ನಿರ್ಧರಿಸಿದೆ. ಈ ಹೊಸ ಮಾರ್ಗಗಳ ಸೇರ್ಪಡೆಯೊಂದಿಗೆ ಭಾರತದಲ್ಲಿ ಜಜೀರಾ ಏರ್‌ವೇಸ್‌ನ ಜಾಲ ಒಟ್ಟು 12 ನಗರಗಳಿಗೆ ವಿಸ್ತರಿಸಿದಂತಾಗಿದೆ. ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಕೊಚ್ಚಿ, ಮುಂಬೈ ಮತ್ತು ತಿರುವನಂತಪುರಂಗೆ ಈಗಾಗಲೇ ಸಂಸ್ಥೆಯು ವಿಮಾನಯಾನ ಸೇವೆ ಒದಗಿಸುತ್ತಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.