2026-03-07 02:12:36

Good News For Silicon City People | ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ | Speed News Kannada

Good News For Silicon City People | ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ | Speed News Kannada

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ ಸಿಕ್ಕಿದೆ, ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ನಿರ್ಮಾಣ ಆಗುತ್ತಿರುವ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಸಿದ್ಧವಾಗಿದೆ. ಡಬಲ್ ಡೆಕ್ಕರ್ ಫ್ಲೈಓವರ್ ಪ್ರಮುಖ ಭಾಗ 2024ರಲ್ಲಿಯೇ ಸಂಚಾರಕ್ಕೆ ಮುಕ್ತವಾಗಿದೆ, 42 ಮೀಟರ್ ಉದ್ದದ ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ತಡವಾದ ಕಾರಣ ಬ್ರಿಡ್ಜ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿರಲಿಲ್ಲ.
ಸದ್ಯ ಕಾರ್ಮಿಕರು ಕಾಂಕ್ರೀಟ್ ಚಪ್ಪಡಿ ಹಾಕುವ ಕೆಲಸವನ್ನು ಪೂರ್ಣಗೊಳಿಸುತ್ತಿದ್ದರೆ, ಬಿಐಎಂ ಅಧಿಕಾರಿಗಳು ಫೆಬ್ರವರಿ ಅಂತ್ಯದ ವೇಳೆಗೆ ಸಿವಿಲ್ ಕೆಲಸಗಳನ್ನು ಪೂರ್ಣಗೊಳಿಸುವ ಸದ್ಯತೆ ಇದೆ ಎನ್ನಲಾಗುತಿದೆ,ಇದು ಸುಮಾರು 499 ಕೋಟಿ ರೂಪಾಯಿ ಮೌಲ್ಯದ ಈ ಫ್ಲೈಓವರ್ ನಗರದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗಳಿಗೆ ಬ್ರೇಕ್ ಹಾಕುವ ನಿರೀಕ್ಷೆ ಇದೆ, ಫೆಬ್ರವರಿ ಅಂತ್ಯದ ವೇಳೆಗೆ ಈ ಫ್ಲೈಓವರ್ ಸಂಚಾರಕ್ಕೆ ಮುಕ್ತವಾಗುವ ಎಲ್ಲ ನಿರೀಕ್ಷೆ ಇದೆ.
ಸಿಲ್ಕ್ ಬೋರ್ಡ್ ಜಂಕ್ಷನ್ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಏಕೆಂದರೆ ಜಂಕ್ಷನ್ ಅನ್ನು ಬೈಪಾಸ್ ಮಾಡಲು ಅವಕಾಶ ಸಿಗುತ್ತದೆ. ಇದರಿಂದ ಸಂಚಾರ ಒತ್ತಡ ಕಡಿಮೆ ಆಗಲಿದೆ. ಈಗಾಗಲೇ ಬನಶಂಕರಿ ಕಡೆಯಿಂದ ಬರುವ ಫ್ಲೈಓವರ್ ಸಂಚಾರಕ್ಕೆ ಮುಕ್ತವಾಗಿದೆ, ಇದು ಈ ಭಾಗದ ಪ್ರಯಾಣಿಕರಿಗೆ ಬಿಗ್ ರಿಲೀಫ್ ನೀಡಿದೆ ಎಂದು ಮತ್ತೋರ್ವ ಪ್ರಯಾಣಿಕರು ತಿಳಿಸಿದ್ದಾರೆ. ಡಬಲ್ ಡೆಕ್ಕರ್ ಫ್ಲೈಓವರ್ ಫೆಬ್ರವರಿ ಅಂತ್ಯಕ್ಕೆ ಸಂಚಾರಕ್ಕೆ ಸಿದ್ಧವಾಗಿದೆ, ಟ್ರಾಫಿಕ್ ಸಮಸ್ಯೆಗೆ ಬಿಗ್ ರಿಲೀಫ್ ನೀಡಲಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.