2026-03-17 01:25:20

Good news for SSLC students | ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Speed News Kannada

Good news for SSLC students | ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Speed News Kannada

ಬೆಂಗಳೂರು: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ ಗುಡ್ ನ್ಯೂಸ್ ನೀಡಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಪಡೆಯಬಹುದು. ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ಗಂಟೆ ವರೆಗೆ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್‌ಗೆ ಹಾಲ್ ಟಿಕೆಟ್ ತೋರಿಸಿದರಷ್ಟೇ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮಾರ್ಚ್ 18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ - 1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟ‌ರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.