2026-04-24 12:35:48

Good news from the relief LPG supply center for Bangalore hotels|ಬೆಂಗಳೂರು ಹೊಟೇಲ್‌ಗಳಿಗೆ ರಿಲೀಫ್ LPG ಪೂರೈಕೆ ಕೇಂದ್ರದಿಂದ ಗುಡ್‌ನ್ಯೂಸ್‌|Speed News Kannada

Good news from the relief LPG supply center for Bangalore hotels|ಬೆಂಗಳೂರು ಹೊಟೇಲ್‌ಗಳಿಗೆ ರಿಲೀಫ್ LPG ಪೂರೈಕೆ ಕೇಂದ್ರದಿಂದ ಗುಡ್‌ನ್ಯೂಸ್‌|Speed News Kannada

ನಗರದಲ್ಲಿ ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಗ್ಯಾಸ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಇದೀಗ ಕೇಂದ್ರ ಸರ್ಕಾರದಿಂದ ದೊಡ್ಡ ಪರಿಹಾರ ದೊರೆತಿದೆ.ಎಲ್‌ಪಿಜಿ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಹಲವಾರು ಹೊಟೇಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದವು. ಗ್ರಾಹಕರಿಗೆ ರುಚಿಕರವಾದ ಊಟ-ತಿಂಡಿಗಳನ್ನು ನೀಡಲು ಸಾಧ್ಯವಾಗದೇ ವ್ಯಾಪಾರಿಗಳು ಸಂಕಷ್ಟ ಅನುಭವಿಸುತ್ತಿದ್ದರು.

ಇದೀಗ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಹೊಟೇಲ್ ಮತ್ತು ಕೈಗಾರಿಕಾ ಘಟಕಗಳಿಗೆ ಅಗತ್ಯವಿರುವ ಎಲ್‌ಪಿಜಿ ಪೂರೈಕೆಯನ್ನು 70% ವರೆಗೆ ಪುನಃಸ್ಥಾಪಿಸುವುದಾಗಿ ಘೋಷಿಸಿದೆ. ಇದರಿಂದ ಆತಿಥ್ಯ ವಲಯಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಗೃಹೋಪಯೋಗಿ ಎಲ್‌ಪಿಜಿಗೆ ಆದ್ಯತೆ ನೀಡಿದ ನಂತರ ಈ ಬಿಕ್ಕಟ್ಟು ಉಂಟಾಗಿತ್ತು. ಇದರಿಂದ ಹೊಟೇಲ್ ಹಾಗೂ ಉತ್ಪಾದನಾ ವಲಯಗಳ ಕಾರ್ಯಾಚರಣೆ ಗಂಭೀರವಾಗಿ ಪ್ರಭಾವಿತವಾಗಿತ್ತು.

ಈ ಹಿನ್ನೆಲೆಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಎರಡು ಪ್ರಮುಖ ಕ್ರಮಗಳನ್ನು ಘೋಷಿಸಿದೆ. ಒಂದು̲ವಲಸೆ ಕಾರ್ಮಿಕರಿಗೆ ಅಡುಗೆ ಅನಿಲ ಸೌಲಭ್ಯ, ಮತ್ತೊಂದು̲ ಹೊಟೇಲ್ ಮತ್ತು ಕೈಗಾರಿಕೆಗಳಿಗೆ ಪೂರೈಕೆ ಹೆಚ್ಚಿಸುವುದು.ಮಾರ್ಚ್ 2026 ರ ಪೂರ್ವದ ಬಳಕೆಯ ಮಟ್ಟದಲ್ಲಿ 70% ವರೆಗೆ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ಜೊತೆಗೆ, ವಿಶೇಷ ಅಗತ್ಯಗಳಿಗೆ ಎಲ್‌ಪಿಜಿ ಬಳಸುವ ಘಟಕಗಳಿಗೆ ಆದ್ಯತೆ ನೀಡಲಾಗುತ್ತದೆ.

ಇದರ ಜೊತೆಗೆ, ವಲಸೆ ಕಾರ್ಮಿಕರಿಗೆ 5 ಕೆಜಿ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯನ್ನೂ ಹೆಚ್ಚಿಸಲಾಗುತ್ತಿದೆ. ಈ ಸಿಲಿಂಡರ್‌ಗಳು ವಿತರಣಾ ಏಜೆನ್ಸಿಗಳು, ಪೆಟ್ರೋಲ್ ಬಂಕ್‌ಗಳು ಮತ್ತು ಚಿಲ್ಲರೆ ಅಂಗಡಿಗಳಲ್ಲಿ ಲಭ್ಯವಿದ್ದು, ಯಾವುದೇ ಗುರುತಿನ ಚೀಟಿ ತೋರಿಸಿ ಖರೀದಿಸಬಹುದಾಗಿದೆ. ಒಟ್ಟಿನಲ್ಲಿ, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಬೆಂಗಳೂರು ಸೇರಿದಂತೆ ದೇಶದಾದ್ಯಂತ ಹೊಟೇಲ್ ಉದ್ಯಮಕ್ಕೆ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.