2026-06-08 05:21:31

Governer VS Government | ಗವರ್ನರ್‌ V/s ಗೌವರ್ನಮೆಂಟ್‌..ಸದನದಲ್ಲಿ ಏನಾಯ್ತು..? | Speed News Kannada

Governer VS Government | ಗವರ್ನರ್‌ V/s ಗೌವರ್ನಮೆಂಟ್‌..ಸದನದಲ್ಲಿ ಏನಾಯ್ತು..? | Speed News Kannada

ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನದಲ್ಲಿಂದು ದೊಡ್ಡ ಹೈಡ್ರಾಮಾ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ದಪಡಿಸಿದ ಭಾಷಣ ಓದದೆ ತಾವೇ ಸಿದ್ಧಪಡಿಸಿದ ಭಾಷಣ ಓದಿ, ಹೊರ ನಡೆದರು. ಮನರೇಗಾ ಯೋಜನೆ ಹೆಸರು ಬದಲಾವಣೆ ಕಾಂಗ್ರೆಸ್‌ & ಬಿಜೆಪಿ ನಡುವೇ ಕಿಡಿಯನ್ನೇ ಹೊತಿಸಿದೆ. ಜಿರಾಮ್‌ಜಿ ಯೋಜನೆಗೆ ಕಾಂಗ್ರೆಸ್‌ ನಾಯಕರು ವಿರೋಧ ವ್ಯಕ್ತಪಡಿಸಿದ್ರು.   ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌‌ ಚುಟುಕಾಗಿ ಭಾಷಣ ಮಾಡಿದರೂ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಗೆ ಅವಕಾಶ ಕೊಡದೇ ಜಾಣತನ ಮೆರೆದ್ರು . ಆದ್ರೆ ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಸದಸ್ಯರ ಆಕ್ರೋಶ ಕೂಡ ಹೊರಹಾಕಿದ್ರು ಅದರಲ್ಲೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹಾಗೂ ಶಾಸಕ ಪ್ರದೀಪ್‌ ಈಶ್ವರ್‌ ರಾಜ್ಯಪಾಲನ್ನೇ ಅಡ್ಡಹಾಕಿ ನೀವು ಭಾಷಣ ಮಾಡಲೇ ಬೇಕು ಅಂತಾ ಘೋಷಣೆ ಕೂಗಿದ್ರು. ಇನ್ನೂ ರಾಜ್ಯಪಾಲರ ಪರ ಬಿಜೆಪಿ ನಾಯಕರು ಘೋಷಣೆ ಕೂಗಿ ಕಲಾಪದಲ್ಲೇ ಬಟ್ಟೆ ಹರಿದುಕೊಂಡಿರೋದು ನಿಜಕ್ಕೂ ಕಲಾಪಕ್ಕೆ ತೋರಿದ ಕಪ್ಪು ಚುಕ್ಕೆ.   ಸರ್ಕಾರ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೆಲವು ಆಕ್ಷೇಪಾರ್ಹ ಅಂಶಗಳಿವೆ. ಅದನ್ನು ಸರಿಪಡಿಸುವಂತೆ ಇಲ್ಲದಿದ್ದರೆ ಅಧಿವೇಶನಕ್ಕೆ ಬರುವುದಿಲ್ಲ, ಭಾಷಣ ಮಾಡುವುದಿಲ್ಲ ಎಂದು ರಾಜ್ಯಪಾಲರು ಸರ್ಕಾರಕ್ಕೆ ಬುಧವಾರ ತಿಳಿಸಿದ್ದರು. ಆದರೆ ಸರ್ಕಾರ ಯಾವುದೇ ಬದಲಾವಣೆ ಮಾಡದಿದ್ದರಿಂದ ರಾಜ್ಯಪಾಲರು ತಾವೇ ಸಿದ್ಧಪಡಿಸಿದ್ದ ಭಾಷಣವನ್ನು ಓದಿ ಎರಡೇ ನಿಮಿಷದಲ್ಲಿ ಸದನದಿಂದ ಹೊರನಡೆದರು. ಈ ವೇಳೆ ಕೆಲ ಸದಸ್ಯರುಗಳು ರಾಜ್ಯಪಾಲರನ್ನು ಹಿಂಬಾಲಿಸಿ ಭಾಷಣ ಓದುವಂತೆ ಒತ್ತಾಯಿಸಿದರು. ಈ ಹಂತದಲ್ಲಿ ಸದನದಲ್ಲೇ ರಾಜ್ಯಪಾಲರನ್ನು ಅಡ್ಡ ಹಾಕಿದ ಕಾಂಗ್ರೆಸ್‌ನ ವಿಧಾನಪರಿಷತ್‌ನ ಸದಸ್ಯರಾದ ಹರಿಪ್ರಸಾದ್, ಬಾಲಕೃಷ್ಣ ಭಾಷಣ ಓದಿ ಎಂದು ರಾಜ್ಯಪಾಲರಿಗೆ ನೇರವಾಗಿ ಆಗ್ರಹಿಸಿದರು. ಆಗ ರಾಜ್ಯಪಾಲರ ಅಡ್ಡಗಟ್ಟಿದ ಸದಸ್ಯರನ್ನು ಬದಿಗೆ ಸರಿಸಿ ರಾಜ್ಯಪಾಲರು ಹೊರಗೆ ಹೋಗಲು ಮಾರ್ಷಲ್‌ಗಳು ಅನುವು ಮಾಡಿಕೊಟ್ಟರು.

ರಾಜ್ಯಪಾಲರು ಸರ್ಕಾರದ ಭಾಷಣವನ್ನಲ್ಲ, ತಮ್ಮದೇ ಭಾಷಣದ ಒಂದು ವಾಕ್ಯವನ್ನು ಓದಿದರು. ಇದು ಪ್ರತಿನಿಧಿ ಸಭೆಗೆ ಮಾಡಿದ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ರಾಜ್ಯಪಾಲರು ತಾವೇ ಸಿದ್ಧಪಡಿಸಿದ ಭಾಷಣವನ್ನು ಓದಿದ್ದಾರೆ. ಇದು ಭಾರತೀಯ ಸಂವಿಧಾನದ 176 ಮತ್ತು 163ನೇ ವಿಧಿಯನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ರಾಜ್ಯಪಾಲರ ಈ ವರ್ತನೆಯ ವಿರುದ್ಧ ನಾವು ಪ್ರತಿಭಟಿಸುತ್ತೇವೆ, ಅವರ ನಡವಳಿಕೆಯ ಕುರಿತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬೇಕೆ ಎಂದು ಸರ್ಕಾರ ಪರಿಶೀಲಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಮತ್ತೊಂಡೆದೆ ಸದನದಿಂದ ಹೊರಹೋಗುತ್ತಿದ್ದ ರಾಜ್ಯಪಾಲರನ್ನು ಬಿಕೆ ಹರಿಪ್ರಸಾದ್ ಮತ್ತು ಇತರ ಶಾಸಕರು ಅಡ್ಡಿಗಟ್ಟಿರುವುದು ಖಂಡನೀಯ. ಕಾಂಗ್ರೆಸ್ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಈ ಕುರಿತು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಗೆ ದೂರು ಸಲ್ಲಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.