2026-05-21 10:40:54

ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ವಂದೇ ಮಾತರಂ ಕಡ್ಡಾಯ ಅಧಿಕಾರಿ ಸರ್ಕಾರದ ಆದೇಶ | Speed News kannada

ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ವಂದೇ ಮಾತರಂ ಕಡ್ಡಾಯ ಅಧಿಕಾರಿ ಸರ್ಕಾರದ ಆದೇಶ | Speed News kannada

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯದ ಎಲ್ಲ ಮದರಸಾಗಳಲ್ಲಿ ಇವತ್ತಿನಿಂದಲೇ ಜಾರಿಗೆ ಬರುವಂತೆ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲೆಗಳು ಆರಂಭವಾಗುವ ಮುನ್ನ ನಡೆಯುವ ಸಾಮೂಹಿಕ ಪ್ರಾರ್ಥನಾ ಸಮಯದಲ್ಲಿ 'ವಂದೇ ಮಾತರಂ' ಹಾಡುವುದನ್ನು ಇಂದಿನಿಂದಲೇ ಕಡ್ಡಾಯಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ವಾರದ ಹಿಂದೆಯಷ್ಟೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಇದೀಗ ಮದರಸಾ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ. ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮದರಸಾಗಳು, ಸರ್ಕಾರಿ ಅನುದಾನಿತ ಮದರಸಾಗಳು, ಸರ್ಕಾರದಿಂದ ಅನುಮೋದಿತ ಶಿಶು ಶಿಕ್ಷಣ ಕೇಂದ್ರಗಳು, ಮಾಧ್ಯಮಿಕ ಶಿಕ್ಷಣ ಕೇಂದ್ರಗಳು, ಮಾನ್ಯತೆ ಪಡೆದ ಅನುದಾನರಹಿತ ಮದರಸಾಗಳಿಗೆ ಈ ನಿರ್ದೇಶನ ಅನ್ವಯಿಸಲಿದೆ.
ಮೇ13 ರಂದು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆಯ ವೇಳೆ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿತ್ತು. ಶಾಲೆ ಆರಂಭದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಗಾಯನದಲ್ಲಿ ಭಾಗವಹಿಸಬೇಕು ಮತ್ತು ಎಲ್ಲಾ ಶಾಲಾ ಮುಖ್ಯಸ್ಥರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.