2026-03-07 12:58:31

Governor Breaks Hate Speech Law! | ದ್ವೇಷ ಭಾಷಣ ವಿಧೇಯಕಕ್ಕೆ ರಾಜ್ಯಪಾಲರು ಬ್ರೇಕ್‌! | Speed News Kannada

Governor Breaks Hate Speech Law! | ದ್ವೇಷ ಭಾಷಣ ವಿಧೇಯಕಕ್ಕೆ ರಾಜ್ಯಪಾಲರು ಬ್ರೇಕ್‌! | Speed News Kannada

ಬೆಂಗಳೂರು: ವಿವಾದಿತ ದ್ವೇಷ ಭಾಷಣ ವಿಧೇಯಕಕ್ಕೆ ರಾಜ್ಯಪಾಲರು ಬ್ರೇಕ್‌ ಹಾಕಿದ್ದಾರೆ. ಸಹಿ ಹಾಕದೇ ರಾಷ್ಟ್ರಪತಿಗಳಿಗೆ ರವಾನೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ರಾಜ್ಯಪಾಲರ ಈ ನಿರ್ಧಾರ ಸರ್ಕಾರದಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಸರ್ಕಾರದ ರಾಜಕೀಯ ದುರುದ್ದೇಶಕ್ಕೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ವಿಧೇಯಕದಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನುಗಳನ್ನು ಪರಿಚಯಿಸಲಾಗಿತ್ತು. 

ಥಾವರಚಂದ್ ಗೆಹ್ಲೋಟ್ ಈ ದ್ವೇಷ ಭಾಷಣ ವಿಧೇಯಕಕ್ಕೆ ಸಹಿ ಹಾಕದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನೆ ಮಾಡಿದ್ದಾರೆ. ಆದರೆ ವಿಧೇಯಕ ಸಂವಿಧಾನದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ. ಇದರಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.