2026-07-23 07:19:14

govt committed to provide cyber security; parameshwar Speeed News Kannada

govt committed to provide cyber security; parameshwar  Speeed News Kannada

ಬೆಂಗಳೂರು: ರಾಜ್ಯದ ನಾಗರಿಕರಿಗೆ ಸೈಬರ್ ಸುರಕ್ಷತೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿಐಡಿ ಹಾಗೂ ಸೈಬರ್ ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ಆಯೋಜಿಸಿದ್ದ 'CIDECODE' 3ನೇ ವರ್ಷದ ಸೈಬರ್ ಅಪರಾಧ ತನಿಖಾ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸೈಬರ್ ಅಪರಾಧಗಳನ್ನು ತನಿಖೆ ಮಾಡಲು ಮತ್ತು ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಲು ಅಗತ್ಯವಾದ ಕೌಶಲ್ಯ, ತರಬೇತಿ ಮತ್ತು ತಂತ್ರಜ್ಞಾನದೊಂದಿಗೆ ವಿಶೇಷ ಸೈಬರ್ ಅಪರಾಧ ಘಟಕಗಳನ್ನು ಸ್ಥಾಪಿಸುವ ಮೂಲಕ ಕರ್ನಾಟಕ ಸರ್ಕಾರವು ಸೈಬರ್ ಅಪರಾಧಗಳನ್ನು ಮಟ್ಟಹಾಕಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಕರ್ನಾಟಕದ ಎಲ್ಲ ಜಿಲ್ಲೆಗಳು ಮತ್ತು ಪ್ರಮುಖ ನಗರಗಳಲ್ಲಿ ಒಟ್ಟು 43 ಸಿಇಎನ್ ಪೊಲೀಸ್ ಠಾಣೆಗಳನ್ನು ಸ್ಥಾಪಿಸಿದೆ. ನಮ್ಮ ನಾಗರಿಕರಿಗೆ ಸೈಬರ್ ಸುರಕ್ಷತೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

ರಾಜ್ಯದಲ್ಲಿ ಸಿಸಿಐಟಿಆರ್ ಸ್ಥಾಪನೆಯಿಂದ ಸೈಬರ್ ಕ್ರೈಮ್ ತನಿಖೆಯನ್ನು ಬಲಪಡಿಸುವುದು, ಸಂಶೋಧನಾ ಸಾಮರ್ಥ್ಯ ವೃದ್ಧಿಸಿಕೊಳ್ಳಲು ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳನ್ನು ಸುಧಾರಿತ ತಾಂತ್ರಿಕ ಕೌಶಲ್ಯಗಳಿಂದ ಸಜ್ಜುಗೊಳಿಸಲು ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಿದೆ.‌ ಈ ಕೇಂದ್ರದಿಂದ ಹೊರಹೊಮ್ಮುತ್ತಿರುವ ಸಂಶೋಧನಾ ಪ್ರಕಟಣೆಗಳು ಮತ್ತು ಸಾಮರ್ಥ್ಯವರ್ಧನಾ ಉಪಕ್ರಮಗಳು ಸೈಬರ್ ಪೊಲೀಸ್ ವ್ಯವಸ್ಥೆಗೆ ಅರ್ಥಪೂರ್ಣ ಕೊಡುಗೆಯನ್ನು ನೀಡುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಸೈಬರ್ ಕಮಾಂಡ್ ಡಿಜಿಪಿ ಪ್ರಣವ್ ಮೊಹಾಂತಿ, ಇನ್ಫೋಸಿಸ್ ಫೌಂಡೇಶನ್ ಟ್ರಸ್ಟಿ ಸುನೀಲ್ ಕುಮಾರ್ ಧಾರೇಶ್ವರ್, ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಸಿಇಒ ವಿನಾಯಕ ಗೋಡ್ಸೆ ಮುಂತಾದವರು ಉಪಸ್ಥಿತರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.