2026-05-04 06:50:29

govt of india ready to purchase sunflower with msp; prahlad joshi| ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ; ಬೆಂಬಲ ಬೆಲೆಯಲ್ಲಿ ಖರೀದಿಗೆ ಅಸ್ತು Speed News Kannada

govt of india ready to purchase sunflower with msp; prahlad joshi| ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ; ಬೆಂಬಲ ಬೆಲೆಯಲ್ಲಿ ಖರೀದಿಗೆ ಅಸ್ತು Speed News Kannada

ನವದೆಹಲಿ: ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ನೆರವಿಗೆ ಮುಂದಾದ ಕೇಂದ್ರ ಸರ್ಕಾರ ಇದೀಗ ಬೆಂಬಲ ಬೆಲೆಯಲ್ಲಿ 9,023 MT ಸೂರ್ಯಕಾಂತಿ ಖರೀದಿಗೆ ಒಪ್ಪಿಗೆ ನೀಡಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸಚಿವ ಜೋಶಿ ಅವರ ಮಾರ್ಗದರ್ಶನದಂತೆ ಕೇಂದ್ರ ಕೃಷಿ ಸಚಿವಾಲಯ ಇದೀಗ ಕ್ವಿಂಟಲ್ ಗೆ ₹ 7721 ಬೆಂಬಲ ಬೆಲೆ ಯೋಜನೆಯಲ್ಲಿ ಸೂರ್ಯಕಾಂತಿ ಖರೀದಿಗೆ ಅನುಮೋದನೆ ನೀಡಿದೆ.

ರಾಜ್ಯದ ಪ್ರಸ್ತಾವನೆಯಂತೆ ಸೂರ್ಯಕಾಂತಿ ಬೆಳೆಗಾರರಿಗೆ ಆಸರೆಯಾಗುವಂತೆ ಸಚಿವ ಪ್ರಲ್ಹಾದ ಜೋಶಿ ಅವರು ಈ ಹಿಂದೆ ಕೇಂದ್ರ ಕೃಷಿ ಸಚಿವರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆದಿದ್ದರು.

ಕೃಷಿ ಸಚಿವರಿಗೆ ಜೋಶಿ ಪತ್ರ:

ಸೂರ್ಯಕಾಂತಿ ಕರ್ನಾಟಕದ ಪ್ರಮುಖ ಎಣ್ಣೆ ಬೀಜಗಳಲ್ಲಿ ಒಂದಾಗಿದ್ದು, 0.59 ಲಕ್ಷ ಹೆಕ್ಟೇರ್‌ನಲ್ಲಿ 0.44 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಹೊಂದಿದೆ. ಆದರೆ, ಪ್ರಸ್ತುತ ಮಾರುಕಟ್ಟೆಯಲ್ಲಿ ಸರ್ಕಾರ ನಿಗದಿಪಡಿಸಿದ ₹ 7721 ಕನಿಷ್ಠ ಬೆಲೆಗಿಂತ ಕಡಿಮೆಯಿದೆ. ಹಾಗಾಗಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಸಿ ರಾಜ್ಯದ ರೈತರ ನೆರವಿಗೆ ಧಾವಿಸಬೇಕೆಂದು ಸಚಿವರು ಪತ್ರ ಬರೆದು ಒತ್ತಾಯಿಸಿದ್ದರು.

ಮುಂದಿನ ದಿನಗಳಲ್ಲಿ ಸೂರ್ಯಕಾಂತಿ ಬೆಲೆ ಮತ್ತಷ್ಟು ಕುಸಿಯುವ ಆತಂಕವಿದೆ. ಹಾಗಾಗಿ ತಕ್ಷಣವೇ ನೆರವಾಗುವಂತೆ ಕೋರಿದ್ದರು. ಸಚಿವ ಜೋಶಿ ಅವರ ಮನವಿ ಪುರಸ್ಕರಿಸಿ ಕೇಂದ್ರ ಸರ್ಕಾರ ಇದೀಗ ರಾಜ್ಯದಿಂದ 9,023 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಅಸ್ತು ಎಂದಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಸಂಬಂಧ ಜೋಶಿ ಅವರಿಗೆ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕದಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಅನುಮೋದನೆ ನೀಡಿದ್ದಾಗಿ ತಿಳಿಸಿದ್ದಾರೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.