2026-04-23 09:36:37

Group photoshoot of MLAs in front of Vidhana Soudha | ವಿಧಾನಸೌಧದ ಮುಂದೆ ಶಾಸಕರ ಗ್ರೂಪ್ ಫೋಟೋಶೂಟ್ | Speed news kannada

Group photoshoot of MLAs in front of Vidhana Soudha | ವಿಧಾನಸೌಧದ ಮುಂದೆ ಶಾಸಕರ ಗ್ರೂಪ್ ಫೋಟೋಶೂಟ್ | Speed news kannada

ಸರ್ಕಾರದ ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್‌ನಡೆದಿದೆ. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹಲವಾರು ಚರ್ಚೆಗಳು ಹರಿದಾಡುತ್ತಿವೆ. ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಹಾಗೂ ಸ್ಪೀಕರ್‌ ಚೇಂಚ್‌ ಆಗುತ್ತಾ ಅನ್ನೋ ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಸಾಮಾನ್ಯವಾಗಿ ವಿಧಾನಸಭೆ ಅವಧಿ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ ಸ್ಪೀಕರ್ ಸಮ್ಮುಖದಲ್ಲಿ ಶಾಸಕರ ಗ್ರೂಪ್ ಫೋಟೋ ತೆಗೆದುಕೊಳ್ಳುವುದು ಸಂಪ್ರದಾಯವಾಗಿದೆ. ಆದ್ರೆ, ಅವಧಿಗೂ ಮುನ್ನವೇ ಸ್ಫೀಕರ್ ಯುಟಿ ಖಾದರ್, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಶಾಸಕರ ಫೋಟೋ ಶೂಟ್ ಮಾಡಿಸಿರುವುದು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಸಿಎಂ ಬದಲಾವಣೆ, ಸ್ಪೀಕರ್ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆಯ ಮುನ್ಸೂಚನೆಯೇ ಎಂಬ ಗೊಂದಲ ಮತ್ತು ಅನುಮಾನಗಳನ್ನು ಶಾಸಕರಲ್ಲಿ ಹುಟ್ಟುಹಾಕಿದೆ. ಹೌದು.. ಶೀಘ್ರದಲ್ಲೇ ಸಂಪುಟಕ್ಕೆ ಸರ್ಜರಿಯಾಗಲಿದ್ದು, ಸ್ಪೀಕರ್ ಖಾದರ್‌ ಅವರು ಸಹ ಸಂಪುಟ ಸೇರುವ ಸಾಧ್ಯತೆಯಿದ ಹೀಗಾಗಿಯೇ ವಿಧಾನಸಭೆ ಮುಕ್ತಾಯಕ್ಕೂ ಮೊದಲೇ ಫೋಟೋ ಶೂಟ್‌ ಮಾಡಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಪಕ್ಷದ ಕೆಲವು ಶಾಸಕರು ಫೋಟೋ ಶೂಟ್ ಬಗ್ಗೆ ನಾನಾ ವ್ಯಾಖ್ಯಾನ ನೀಡುತ್ತಿದ್ದಾರೆ. ಹೌದು..ಅವಧಿ ದಿಢೀರ್ ಆಗಿ ಸ್ಪೀಕರ್ ಫೋಟೋ ಶೂಟ್ ಮಾಡಿಸಿಕೊಂಡ ಉದ್ದೇಶ ಏನು ಎಂಬುವುದು ಕುತೂಹಲವಾಗಿದೆ. ಇದು ಸಂಪುಟ ಪುನಾರಚನೆ ಆಗಲಿದೆ ಎಂಬ ಸುಳಿವು ಆಗಿರಬಹುದು ಎನ್ನುತ್ತಾರೆ.ಇನ್ನು ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.  ಈ ಕುರಿತು ವಿಪಕ್ಷ ಬಿಜೆಪಿ ಸಹ ಟ್ವೀಟ್ ಮಾಡಿದ್ದು, ಇದು ಸಿಎಂ ಸಿದ್ದರಾಮಯ್ಯ ಔಟ್​ಗೋಯಿಂಗ್ ಫೋಟೋಶೂಟ್ ಅಲ್ವಾ? ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿ ಪೋಸ್ಟ್ ಮಾಡಿದೆ. ಒಟ್ಟಿನಲ್ಲಿ ಅವಧಿಗೂ ಮುನ್ನವೇ 16ನೇ ವಿಧಾನಸಭೆ ಸದಸ್ಯರ ಗ್ರೂಫ್​ ಫೋಟೋ ಶೂಟ್ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬದಲಾವಣೆಯಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.