2026-06-08 01:23:54

H.D. Kumaraswamy challenges CM Siddaramaiah | ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ. ಕುಮಾರಸ್ವಾಮಿ ಸವಾಲ್ | Speed news kannada

H.D. Kumaraswamy challenges CM Siddaramaiah | ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ. ಕುಮಾರಸ್ವಾಮಿ ಸವಾಲ್ | Speed news kannada

ಜೆಡಿಎಸ್​​ ಬಗ್ಗೆ ಟೀಕಿಸುವ ಸಿಎಂ ಸಿದ್ದರಾಮಯ್ಯ ಅವರು ಪ್ರಾದೇಶಿಕ ಪಕ್ಷವೊಂದನ್ನು ಸ್ಥಾಪಿಸಿ ಚುನಾವಣೆಗೆ ಸ್ಫರ್ಧಿಸಲಿ. ಆಗ ಅವರು ಎಷ್ಟು ಕ್ಷೇತ್ರ ಗೆಲ್ಲುತ್ತಾರೆ ಎಂಬುದು ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಕುಟುಂಬ ರಾಜಕಾರಣದ ವಿಷಯವನ್ನೂ ಪ್ರಸ್ತಾಪಿಸಿದ ಅವರು, ತಮ್ಮ ಕುಟುಂಬದ ರಾಜಕೀಯ ಪ್ರವೇಶವು ಜನರ ಬೆಂಬಲದಿಂದ ಆದದ್ದು, ಆದರೆ ಸಿದ್ದರಾಮಯ್ಯರ ಮಗನ ರಾಜಕೀಯ ಪ್ರವೇಶವು ರಾಜ್ಯದ ಉದ್ದಾರಕ್ಕಲ್ಲ, ಬದಲಿಗೆ ವಸೂಲಿಗಾಗಿ ಎಂದು ಆರೋಪಿಸಿದ್ದಾರೆ. ಜೆಡಿಎಸ್ 40 ಸೀಟುಗಳನ್ನು ಗೆದ್ದಿದ್ದು ಸ್ವಂತ ಶಕ್ತಿಯಿಂದ. 130-140 ಸೀಟು ಗೆದ್ದಿದ್ದೀವಿ ಎಂಬ ಅಹಂಕಾರ ಶಾಶ್ವತವಲ್ಲ. ತಮಿಳುನಾಡಲ್ಲಿ ಡಿಎಂಕೆ ಬಳಿಯಿಂದ ರಾಷ್ಟ್ರೀಯ ಪಕ್ಷ ಕಾಂಗ್ರೆಸ್​ 28 ಸೀಟುಗಳನ್ನು ಪಡೆದಿದ್ದು, ಆ ಪೈಕಿ ಕೆಲ ಕ್ಷೇತ್ರಗಳಿಗೂ ಅಭ್ಯರ್ಥಿಗಳಿಲ್ಲದೆ ಬೀದಿಯಲ್ಲಿ ಹೋಗುವವರನ್ನು ತಂದು ನಿಲ್ಲಿಸಿದ್ದಾರೆ ಎಂದು ಹೆಚ್​​ಡಿಕೆ ವ್ಯಂಗ್ಯವಾಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.