2026-04-24 01:39:40

H.D. Kumaraswamy says no to glorification | ನನ್ನ ವೈಭವೀಕರಣ ಮಾಡುವುದು ಬೇಡವೆಂದ H.D.ಕುಮಾರಸ್ವಾಮಿ | Speed news kannada

H.D. Kumaraswamy says no to glorification | ನನ್ನ ವೈಭವೀಕರಣ ಮಾಡುವುದು ಬೇಡವೆಂದ H.D.ಕುಮಾರಸ್ವಾಮಿ | Speed news kannada

ಬೆಂಗಳೂರಿನ ಜೆಡಿಎಸ್‌ ಕಚೇರಿಯ ಅಂಬೇಡ್ಕರ್‌ ಕಾರ್ಯಕ್ರಮದಲ್ಲಿ ಅಚ್ಚರಿಕೆಯ ಹೇಳಿಕೆಯನ್ನು ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿಯವರು ಕುಮಾರಣ್ಣನ ಭವಿಷ್ಯ ಬಿಡಿ, ಕುಮಾರಣ್ಣನ ಭವಿಷ್ಯ ಮುಗಿದು ಹೋಗಿದೆ. ರಾಜ್ಯದ ಜನರ ಭವಿಷ್ಯಕ್ಕಾಗಿ ಕಾರ್ಯಕರ್ತರು ದುಡಿಮೆ ಮಾಡಿ ಎಂದು ಅಚ್ಚರಿಕೆಯ ಹೇಳಿಕೆ ನುಡಿದಿದ್ದಾರೆ. ಕಾರ್ಯಕರ್ತರು  ಮುಂದಿನ ಸಿಎಂ ಕುಮಾರಸ್ವಾಮಿ ಆಗಲಿ ಎಂದು ಕೂಗುವ ಸಮಯ, ಸಂದರ್ಭ ಇದಲ್ಲ, ನನ್ನ ವೈಭವಿಕರಣ ಮಾಡುವುದು ಬೇಡ ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ದೇವರ ದಯೆಯಿಂದ, ಎರಡು ಬಾರಿ ಈ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪೂರ್ಣಪ್ರಮಾಣದ ಬಹುಮತ ಇಲ್ಲದಿದ್ದರೂ ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನ ದೃಷ್ಟಿಯಲ್ಲಿ ನೋಡಿದ್ದೇನೆ. ರಾಜ್ಯಕ್ಕೆ ಒಳ್ಳೆಯದು ಆಗಬೇಕಂದ್ರೆ ಜೆಡಿಎಸ್ ಅನಿವಾರ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇನ್ಮುಂದೆ ವಾರದಲ್ಲಿ ಎರಡು ದಿನ ಕರ್ನಾಟಕದಲ್ಲಿ ಇರುತ್ತೇನೆ ಎಂದು ಸಹ ಅವರು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.