2026-03-07 06:02:32

H Kumaraswamy | ಕರ್ನಾಟಕ ರೈಲ್ವೆ ಯೋಜನೆಗಳು ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಎಚ್ ಕುಮಾರಸ್ವಾಮಿ ಚರ್ಚೆ | Speed News Kannada

H Kumaraswamy  | ಕರ್ನಾಟಕ ರೈಲ್ವೆ ಯೋಜನೆಗಳು ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಎಚ್ ಕುಮಾರಸ್ವಾಮಿ ಚರ್ಚೆ | Speed News Kannada

ನವದೆಹಲಿ: ಕರ್ನಾಟಕದ ರೈಲ್ವೆ ಅಭಿವೃದ್ಧಿ ಯೋಜನೆಗಳನ್ನು ಕುರಿತು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಇಲಾಖೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಕರ್ನಾಟಕದ ರೈಲ್ವೆ ವ್ಯವಸ್ಥೆಯನ್ನು ಸಶಕ್ತಗೊಳಿಸುವ ಅಗತ್ಯ ಕುರಿತು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಮಂಡ್ಯ, ಮೈಸೂರು, ಹಾಸನ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚಿಸುವ ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ವೇಗಗೊಳಿಸುವ ಕುರಿತು ವ್ಯಾಪಕ  ಚರ್ಚೆ ನಡೆಸಿದರು. ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ ಅವರೂ ಉಪಸ್ಥಿತರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.