ನವದೆಹಲಿ: ಕರ್ನಾಟಕದ ರೈಲ್ವೆ ಅಭಿವೃದ್ಧಿ ಯೋಜನೆಗಳನ್ನು ಕುರಿತು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಇಲಾಖೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಕರ್ನಾಟಕದ ರೈಲ್ವೆ ವ್ಯವಸ್ಥೆಯನ್ನು ಸಶಕ್ತಗೊಳಿಸುವ ಅಗತ್ಯ ಕುರಿತು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಮಂಡ್ಯ, ಮೈಸೂರು, ಹಾಸನ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚಿಸುವ ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ವೇಗಗೊಳಿಸುವ ಕುರಿತು ವ್ಯಾಪಕ ಚರ್ಚೆ ನಡೆಸಿದರು. ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ ಅವರೂ ಉಪಸ್ಥಿತರಿದ್ದರು.