2026-04-23 09:36:08

H5N1 bird flu enters Bengaluru | ಬೆಂಗಳೂರಿಗೆ ಕಾಲಿಟ್ಟ H5N1 ಹಕ್ಕಿ ಜ್ವರ | Speed news kannada

H5N1 bird flu enters Bengaluru | ಬೆಂಗಳೂರಿಗೆ ಕಾಲಿಟ್ಟ H5N1 ಹಕ್ಕಿ ಜ್ವರ | Speed news kannada

ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್ ಹಕ್ಕಿ ಜ್ವರ ಕಾಲಿಟ್ಟಿದ್ದು, ಮೊದಲ ತಪಾಸಣೆಯಲ್ಲೇ ಧೃಡ ಎಂದು ಸಾಬೀತಾಗಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ತಪಾಸಣೆ ವೇಳೆ ಕೋಳಿಗಳಲ್ಲಿ ಈ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ತಕ್ಷಣವೇ ಹೆಸರಘಟ್ಟದಲ್ಲಿರುವ ಪೌಲ್ಟ್ರಿ ಫಾರಂ ಅನ್ನು ಮುಚ್ಚಲಾಗಿದೆ. ರಾಜ್ಯದ ಅಧೀನದಲ್ಲಿರುವ ಈ ಫಾರಂನಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಆಗುತ್ತಿದ್ದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ಸದ್ಯ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಾಹಿತಿ ಬಂದಿದ್ದು, ರಾಜ್ಯ ಸರ್ಕಾರ ಪಶು ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ. ಬಿಸಿಲ ತಾಪದಲ್ಲಿ ಬಂದಿರುವ H5N1 ಹಕ್ಕಿ ಜ್ವರ ಬಂದಿದ್ದು, ಸುತ್ತಮುತ್ತ ಇರುವ ಕೋಳಿ ಶೆಡ್ ತಪಾಸಣೆ ನಡೆಸುವಂತೆ ತಿಳಿಸಿದ್ದಾರೆ.

ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಸೋಂಕು ಆಗಿದ್ದು ಅದು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು ಇತರ ಪ್ರಾಣಿಗಳಲ್ಲಿಯೂ ಕಂಡು ಬರುತ್ತದೆ. ಈಗ ಇದೇ ವೈರಸ್ ನಗರದಲ್ಲಿ ಕಂಡುಬರುತ್ತಿದ್ದು, ಪೌಲ್ಟ್ರಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಕೋಳಿ ಸಾಕಾಣಿಕೆದಾರರನ್ನು ವೈದ್ಯಾಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಸುತ್ತಮುತ್ತಲಿನ ಕೋಳಿ ಶೆಡ್‌ಗಳಲ್ಲೂ ತಪಾಸಣೆ ನಡೆಸುವಂತೆ ಪಶುವೈದ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.