ತಮಿಳುನಾಡು ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಮಹತ್ವದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಈ ಪ್ರಣಾಳಿಕೆಯನ್ನು ಅನಾವರಣಗೊಳಿಸಿದರು.ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಪಾಯಿ, ನಿರುದ್ಯೋಗಿ ಯುವಕರಿಗೆ 3 ಲಕ್ಷ ಸರ್ಕಾರಿ ಉದ್ಯೋಗ ಹಾಗೂ ಭೂ ರಹಿತ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ನೆರವು ನೀಡುವ ಭರವಸೆ ನೀಡಲಾಗಿದೆ.
ಇದರ ಜೊತೆಗೆ ಆರೋಗ್ಯ, ಮೀನುಗಾರರ ಸಮಸ್ಯೆಗಳು, ಭೂ ದಾಖಲೆ ಹಂಚಿಕೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಲಾಗಿದೆ.ಜನರ ಅಭಿಪ್ರಾಯ ಸಂಗ್ರಹಿಸಿ ಈ ಪ್ರಣಾಳಿಕೆ ರೂಪಿಸಲಾಗಿದೆ ಎಂದು ತಿಳಿಸಿರುವ ಡಿ.ಕೆ. ಶಿವಕುಮಾರ್, ಎಲ್ಲಾ ವರ್ಗಗಳ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದ್ದಾರೆ.ಮುಂದಿನ ಚುನಾವಣೆಯಲ್ಲಿ ಜನರ ಆಶೀರ್ವಾದದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ