2026-07-23 08:51:05

Hand manifesto released in Tamil Nadu, promises jobs to women|ತಮಿಳುನಾಡಲ್ಲಿ ಕೈ ಪ್ರಣಾಳಿಕೆ ಬಿಡುಗಡೆ ಮಹಿಳೆಯರಿಗೆ ಉದ್ಯೋಗ ಭರವಸೆ|Speed News Kannada

Hand manifesto released in Tamil Nadu, promises jobs to women|ತಮಿಳುನಾಡಲ್ಲಿ ಕೈ ಪ್ರಣಾಳಿಕೆ ಬಿಡುಗಡೆ ಮಹಿಳೆಯರಿಗೆ ಉದ್ಯೋಗ ಭರವಸೆ|Speed News Kannada

ತಮಿಳುನಾಡು ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಮಹತ್ವದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಈ ಪ್ರಣಾಳಿಕೆಯನ್ನು ಅನಾವರಣಗೊಳಿಸಿದರು.ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಪಾಯಿ, ನಿರುದ್ಯೋಗಿ ಯುವಕರಿಗೆ 3 ಲಕ್ಷ ಸರ್ಕಾರಿ ಉದ್ಯೋಗ ಹಾಗೂ ಭೂ ರಹಿತ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ನೆರವು ನೀಡುವ ಭರವಸೆ ನೀಡಲಾಗಿದೆ.

ಇದರ ಜೊತೆಗೆ ಆರೋಗ್ಯ, ಮೀನುಗಾರರ ಸಮಸ್ಯೆಗಳು, ಭೂ ದಾಖಲೆ ಹಂಚಿಕೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಲಾಗಿದೆ.ಜನರ ಅಭಿಪ್ರಾಯ ಸಂಗ್ರಹಿಸಿ ಈ ಪ್ರಣಾಳಿಕೆ ರೂಪಿಸಲಾಗಿದೆ ಎಂದು ತಿಳಿಸಿರುವ ಡಿ.ಕೆ. ಶಿವಕುಮಾರ್, ಎಲ್ಲಾ ವರ್ಗಗಳ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದ್ದಾರೆ.ಮುಂದಿನ ಚುನಾವಣೆಯಲ್ಲಿ ಜನರ ಆಶೀರ್ವಾದದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.