2026-06-25 02:18:34

Hassan engineer Shweta dies after slipping into coma|ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾವು|Speed News Kannada

Hassan engineer Shweta dies after slipping into coma|ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾವು|Speed News Kannada

ಹಾಸನ ಜಿಲ್ಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ 25 ವರ್ಷದ ಯುವತಿ ಶ್ವೇತಾ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಈ ಘಟನೆ ಇಡೀ ಗ್ರಾಮದಲ್ಲಿ ಹಾಗೂ ಕುಟುಂಬಸ್ಥರಲ್ಲಿ ಸೂತಕ ಛಾಯೆ ಆವರಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ(25), ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 25ರ ಶುಕ್ರವಾರ ಸಂಜೆ ಮನೆಯಲ್ಲಿದ್ದಾಗ ಶ್ವೇತಾ ಹಠಾತ್ತಾಗಿ ಕುಸಿದು ಬಿದ್ದಿದ್ದರು.

ಕುಸಿದು ಬಿದ್ದ ತಕ್ಷಣವೇ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾವನ್ನಪ್ಪಿದ್ದಾರೆ.

ಮಗಳ ಸಾವಿನ ನೋವಿನ ನಡುವೆಯೂ ಪೋಷಕರು ಶ್ವೇತಾ ಅವರ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದ್ದರು. ಆ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗಲು ಮುಂದಾಗಿದ್ದರು. ಆದರೆ ಆಕೆಯ ದೇಹದ ಆರೋಗ್ಯದ ಸ್ಥಿತಿಗತಿಯಿಂದಾಗಿ ಅಂಗಾಂಗ ದಾನ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ. ಇಂದು ಬಂಡಿಲಕ್ಕನಕೊಪ್ಪಲು ಗ್ರಾಮದಲ್ಲಿ ಯುವತಿಯ ಅಂತ್ಯಕ್ರಿಯೆ ನಡೆಯಲಿದ್ದು ತುಂಬು ವಯಸ್ಸಿನ ಮಗಳ ಹಠಾತ್ ಸಾವಿನಿಂದ ಗಂಗಾಧರ್ ಕುಟುಂಬ ಕಂಗಾಲಾಗಿದ್ದು, ಕುಟುಂಬದವರು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.