ನವದೆಹಲಿ: ರಾಜ್ಯಸಭೆಗೆ ರಾಜ್ಯದಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಕಳುಹಿಸಲು ಬಿಜೆಪಿ ಹೈಕಮಾಂಡ್ ಬಹುತೇಕ ಒಪ್ಪಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಗೌಡರ ಆಯ್ಕೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಬಿಜೆಪಿ ಘಟಕವೂ ಎಚ್.ಡಿ. ದೇವೇಗೌಡ ಮತ್ತು ಡಿ.ವಿ.ಸದಾನಂದಗೌಡ ಅವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಗೆ ಕಳುಹಿಸಿದೆ. ಎರಡು ಮೂರು ದಿನಗಳಲ್ಲಿ ಅಂತಿಮ ಹೆಸರನ್ನು ವರಿಷ್ಠರು ಘೋಷಿಸಲಿದ್ದಾರೆ.
ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವ ಕಾರಣಕ್ಕೆ ದೇವೇಗೌಡ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಬಿಜೆಪಿ ಮುಖಂಡರುಆಸಕ್ತಿ ಹೊಂದಿದ್ದಾರೆ. ಈ ಮೂಲಕ ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವನೆಯಲ್ಲಿ ಎನ್ ಡೆ ಮೈತ್ರಿಕೂಟಕ್ಕೆ ಅನುಕೂಲ ಆಗಬಹುದು ಎಂಬ ನಿರೀಕ್ಷೆ ಹೈಕಮಾಂಡ್ ನದ್ದು.
ಆರಂಭದಲ್ಲಿ ದೇವೇಗೌಡರ ಆಯ್ಕೆಯನ್ನು ಬಿಜೆಪಿ ರಾಜ್ಯ ಘಟಕದ ನಾಯಕರು ವಿರೋಧಿಸಿದ್ದರು. ಅವರನ್ನು ಮಹಾರಾಷ್ಟ್ರದಿಂದ ಕಣಕ್ಕೆ ಇಳಿಸಬಹುದಲ್ಲವೇ ಎಂಬ ಮುಂದಿಟ್ಟಿದ್ದರು. ಆದರೆ ದೇವೇಗೌಡರು ಮಹಾರಾಷ್ಟ್ರದಿಂದ ಕಣಕ್ಕೆ ಇಳಿಯಲು ಆಸಕ್ತಿ ತೋರಲಿಲ್ಲ. ಹೀಗಾಗಿ ರಾಜ್ಯದಿಂದಲೇ ಅವರನ್ನು ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ.