2026-06-08 04:09:34

Health department employee dies from heart attack | ನಿದ್ದೆಗೆ ಜಾರಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಆರೋಗ್ಯ ಇಲಾಖೆ ನೌಕರ | Speed News Kannada

Health department employee dies from heart attack | ನಿದ್ದೆಗೆ ಜಾರಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಆರೋಗ್ಯ ಇಲಾಖೆ ನೌಕರ | Speed News Kannada

ಹಾಸನ: ರಾಜ್ಯದಲ್ಲಿ ಮತ್ತೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿದ್ದೆಗೆ ಜಾರಿದ್ದಾಗಲೇ ಆರೋಗ್ಯ ಇಲಾಖೆ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಗವೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 ವರ್ಷದ ದೇವಾನಂದ್ ಮೃತ ದುರ್ದೈವಿ. 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು.
ದೇವಾನಂದ್ ಅವರಿಗೆ ಇಂದು ಬೆಳಗಿನ ಜಾವ ಮಲಗಿದ್ದಲಿಯೇ ಹೃದಯಾಘಾತವಾಗಿದೆ. ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ದೇವಾನಂದ್ ಅವರು ಪೌರಾಟಿಕ ನಾಟಕಗಳಲ್ಲಿ ಕೂಡ ಅಭಿನಯಿಸುತ್ತಿದ್ದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.