2026-06-28 05:05:15

Health department to go on strike from March 11 | ಮಾರ್ಚ್‌ 11ರಿಂದ ಆರೋಗ್ಯ ಇಲಾಖೆ ಮುಷ್ಕರ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತ | Speed News Kannada

Health department to go on strike from March 11 | ಮಾರ್ಚ್‌ 11ರಿಂದ ಆರೋಗ್ಯ ಇಲಾಖೆ ಮುಷ್ಕರ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತ | Speed News Kannada

ಬೆಂಗಳೂರು: ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾರ್ಚ್‌ 11ರಿಂದ ಮುಷ್ಕರ ಆರಂಭಿಸುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ತಿಳಿಸಿದೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ  ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬರಲಾಗಿದ್ದರೂ ಪ್ರಯೋಜನವಾಗಿಲ್ಲ. ಹಾಗಾಗಿ ಮುಷ್ಕರ ಅನಿವಾರ್ಯವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಲು ಗಮನ ಹರಿಸಬೇಕು ಎಂದು ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ್ ಮೇಟಿ, ನೌಕರರ ಕೇಂದ್ರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಾ.11ರಿಂದ 15ರ ವರೆಗೆ ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸಲಾಗುತ್ತದೆ. ಈ ವೇಳೆ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುತ್ತೇವೆ. ನಂತರವೂ ಸರ್ಕಾರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದರೆ ಮಾ.16ರಿಂದ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸುತ್ತೇವೆ ಎಂದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಆರೋಗ್ಯ ಇಲಾಖೆ ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ. ಇವನ್ನು ಈಡೇರಿಸುವುದು ಸರ್ಕಾರದ ಕೆಲಸ. ಈ‌ ಮುಷ್ಕರಕ್ಕೆ ಸಂಘದ ಸಂಪೂರ್ಣ ಬೆಂಬಲವಿದೆ ಎಂದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.