ಬೆಂಗಳೂರು: ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಇಂದು ಸಂಜೆ ಸುರಿದ ಮಳೆಗೆ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ದಿಢೀರ್ ಎಂದು ಸುರಿದ ಮಳೆಗೆ ಕಚೇರಿಗಳಿಂದ ಹೊರಟ ಸಾರ್ವಜನಿಕರು ಪರದಾಡುವಂತಾಗಿದೆ. ಬಸ್ ನಿಲ್ದಾಣ, ಮೆಟ್ರೋ ಕೆಳಗೆ ಮತ್ತು ಅಂಗಡಿ ಮುಂಗಟ್ಟುಗಳ ಆಶ್ರಯ ಪಡೆದಿದ್ದರು. ಮೆಜೆಸ್ಟಿಕ್, ಶಿವಾಜಿನಗರ, ಮಲ್ಲೇಶ್ವರಂ, ಬಸವನಗುಡಿ, ಗಿರಿನಗರ, ವಸಂತನಗರ, ಕೆ.ಆರ್.ಸರ್ಕಲ್, ಕೆ.ಆರ್.ಮಾರ್ಕೆಟ್, ವಿಜಯನಗರ, ಹೆಚ್ಎಸ್ಆರ್ ಲೇಔಟ್, ಆಡುಗೋಡಿ, ಮಡಿವಾಳ, ಬಿಟಿಎಂ ಲೇಔಟ್, ಹೆಬ್ಬಾಳ, ಜಯನಗರ, ಬನಶಂಕರಿ, ಕೆಂಗೇರಿ, ನಾಯಂಡಹಳ್ಳಿ, ಬಸವೇಶ್ವರ ನಗರ, ರಾಜಾಜಿನಗರ, ಜ್ಞಾನಭಾರತಿ, ಆರ್.ಆರ್.ನಗರ, ಶಾಂತಿನಗರ, ಕೋರಮಂಗಲ, ಕಾಮಾಕ್ಷಿಪಾಳ್ಯ, ಬ್ಯಾಟರಾಯನಪುರ, ಸಹಕಾರನಗರ, ಯಲಹಂಕ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.
ಕೆಲವು ಭಾಗಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು, ದೆಹಲಿಯಿಂದ ಆಗಮಿಸಿದ್ದ ಇಂಡಿಗೋ ವಿಮಾನ ಲ್ಯಾಂಡ್ ಆಗದೆ ಕೆಲ ಸಮಯ ಆಕಾಶದಲ್ಲೇ ಸುತ್ತು ಹೊಡೆದಿದೆ.