2026-04-23 06:11:31

Heavy rain in coffey country | ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ | Speed news kannada

Heavy rain in coffey country | ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ | Speed news kannada

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ತಾಲೂಕಿನ ಗ್ರಾಮೀಣ ಭಾಗಗಳಲ್ಲೂ ಮಳೆಯ ಆರ್ಭಟ ಜೋರಾಗಿದೆ. ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾಫಿ ತೋಟಗಳಿಗೆ ಇದು ಆಸರೆಯಾದರೂ ಬಿರುಗಾಳಿಯ ಭೀತಿ ಆವರಿಸಿದೆ. ಮೂಡಿಗೆರೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಸ್ತೆಗಳು ನದಿಯಂತಾಗಿವೆ. ಚರಂಡಿಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದ್ದು, ಮಾರುಕಟ್ಟೆಗೆ ಬಂದಿದ್ದ ಸಾರ್ವಜನಿಕರು ಮತ್ತು ವಾಹನ ಸವಾರರು ಹೈರಾಣಾಗಿದ್ದಾರೆ. ಮಲೆನಾಡು ಭಾಗದ ಹಲವೆಡೆ ಮರಗಳು ಉರುಳುವ ಭೀತಿ ಎದುರಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.