2026-06-08 01:29:18

Helicopter crashes into sea | ಸಮುದ್ರಕ್ಕೆ ಬಿದ್ದ ಹೆಲಿಕಾಪ್ಟರ್ ಎಲ್ಲ ಪ್ರಯಾಣಿಕರ ರಕ್ಷಣೆ | Speed News Kannada

Helicopter crashes into sea | ಸಮುದ್ರಕ್ಕೆ ಬಿದ್ದ ಹೆಲಿಕಾಪ್ಟರ್ ಎಲ್ಲ ಪ್ರಯಾಣಿಕರ ರಕ್ಷಣೆ | Speed News Kannada

ಅಂಡಮಾನ್ : ಇಬ್ಬರು ಸಿಬ್ಬಂದಿ, ಒಂದು ಮಗು ಸೇರಿ ಏಳು ಪ್ರಯಾಣಿಕರಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಇಂದು ಬೆಳಗ್ಗೆ ಉತ್ತರ ಮತ್ತು ಮಧ್ಯ ಅಂಡಮಾನ್ ಜಿಲ್ಲೆಯ ರಂಗತ್‌ ನಿಂದ ಟೇಕ್‌ಆಫ್ ಆದ ಕೆಲ ಸಮಯದಲ್ಲೇ ಸಮುದ್ರದಲ್ಲಿ ಪತನಗೊಂಡಿದೆ. ಅದೃಷ್ಟವಶಾತ್‌ ಎಲ್ಲ ಪ್ರಯಾಣಿಕರೂ ಪಾರಾಗಿದ್ದಾರೆ. 
ಹೆಲಿಕಾಪ್ಟರ್ ಬೆಳಗ್ಗೆ 8.30ರ ಸುಮಾರಿಗೆ ಪೋರ್ಟ್ ಬ್ಲೇರ್‌ ನಿಂದ ರಂಗತ್‌ಗೆ ಹೊರಟಿತ್ತು. 9.30ಕ್ಕೆ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ, ರನ್ ವೇಗಿಂತ 300 ಮೀಟರ್ ದೂರದಲ್ಲಿ ಸಮುದ್ರಕ್ಕೆ ಬಿದ್ದಿದೆ. ವಿಮಾನದಲ್ಲಿ ಐವರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು. ಎಲ್ಲರನ್ನೂ ರಕ್ಷಿಸಲಾಗಿದೆ  ಎಂದು ಪವನ್ ಹನ್ಸ್ ವಕ್ತಾರರು ತಿಳಿಸಿದ್ದಾರೆ.
ಐವರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ ಕೆಲವು ತಾಂತ್ರಿಕ ದೋಷಗಳಿದ್ದವು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಹಾಗಾಗಿ, ಪೈಲಟ್ ಸಮುದ್ರದಲ್ಲಿ ಕ್ರ್ಯಾಶ್ ಲ್ಯಾಂಡಿಂಗ್ ಮಾಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಹಿರಿಯ ನಾಗರಿಕ ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರ ಮತ್ತು ಮಧ್ಯ ಅಂಡಮಾನ್ ಉಪ ಆಯುಕ್ತ ಸುಶಾಂತ್ ಪಾಧಾ ಅವರು ರಕ್ಷಣಾ ತಂಡ, ಪೊಲೀಸರು ಮತ್ತು ಕೋಸ್ಟ್ ಗಾರ್ಡ್ ತಕ್ಷಣ ಕಾರ್ಯನಿರ್ವಹಿಸಿ ಏಳು ಜನರನ್ನು ರಕ್ಷಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.