2026-03-07 06:11:30

Hezbollah announces missile | ಖಮೇನಿ ಹತ್ಯೆಗೆ ಪ್ರತೀಕಾರ ಇಸ್ರೇಲ್ ಮೇಲೆ ಕ್ಷಿಪಣಿ ಡ್ರೋನ್ ದಾಳಿ ಹಿಜ್ಬುಲ್ಲಾ ಪ್ರಕಟಣೆ | Speed News kannada

Hezbollah announces missile | ಖಮೇನಿ ಹತ್ಯೆಗೆ ಪ್ರತೀಕಾರ ಇಸ್ರೇಲ್ ಮೇಲೆ ಕ್ಷಿಪಣಿ ಡ್ರೋನ್ ದಾಳಿ ಹಿಜ್ಬುಲ್ಲಾ ಪ್ರಕಟಣೆ | Speed News kannada

ಬೈರೂತ್: ಇರಾನ್‌ ಅಧ್ಯಕ್ಷ ಅಯತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ಇಂದು ಪ್ರತಿಪಾದಿಸಿದೆ. 
ಭಾನುವಾರ ರಾತ್ರಿ ಇಸ್ರೇಲ್ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ. ಈ ದಾಳಿಗೆ ಪ್ರತಿಯಾಗಿ ಇಸ್ರೇಲ್ ಲೆಬನಾನ್ ರಾಜಧಾನಿ ಬೈರೂತ್ ಮೇಲೆ ದಾಳಿ ನಡೆಸಿದೆ. ಬೈರೂತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿ ಇಸ್ರೇಲ್ ಇಂದು ದಾಳಿ ನಡೆಸಿದೆ ಎಂದು ಲೆಬನಾನ್ ಮಾಧ್ಯಮಗಳು ವರದಿ ಮಾಡಿವೆ.
ಖಮೇನಿ ಅವರ ಹತ್ಯೆಗೆ ಪ್ರತೀಕಾರವಾಗಿ, ಲೆಬನಾನ್ ಜನರ ರಕ್ಷಣೆಗಾಗಿ ಮತ್ತು ಇಸ್ರೇಲ್‌ ನಡೆಸಿದ ಸರಣಿ ದಾಳಿಗಳಿಗೆ ಪ್ರತಿಯಾಗಿ ಇಸ್ರೇಲ್ ಮೇಲೆ ಕ್ಷಿಪಣಿಗಳ ಸುರಿಮಳೆ ಮತ್ತು ಡ್ರೋನ್‌ಗಳ ದಾಳಿ ನಡೆಸಲಾಗಿದೆ ಎಂದು ಹಿಜ್ಬುಲ್ಲಾ ಪ್ರಕಟಣೆಯಲ್ಲಿ ತಿಳಿಸಿದೆ.
ಇರಾನ್ ಮೇಲೆ ದಾಳಿ ನಡೆಸಲು ಆಂಥ್ರೋಪಿಕ್‌ನ ‘ಕ್ಲಾಡ್’ ಎ.ಐ ಬಳಸಿದ ಅಮೆರಿಕ:
ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕ ʼಆಂಥ್ರೋಪಿಕ್‌ನ ‘ಕ್ಲಾಡ್’ ಎ.ಐ ಬಳಕೆ ಮಾಡಿತ್ತು ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ.
ಆಂಥ್ರೋಪಿಕ್‌ನ ಜೊತೆ ಮಾಡಿಕೊಂಡಿದ್ದ ಎಲ್ಲಾ ಒಪ್ಪಂದಗಳನ್ನು ರದ್ದು ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಕೆಲವೇ ಗಂಟೆಗಳಲ್ಲಿ ದಾಳಿಗೆ ಕ್ಲಾಡ್ ಬಳಸಿಕೊಂಡಿದೆ ಎಂದು ತಿಳಿದು ಬಂದಿದೆ.
ಗುಪ್ತಚರ, ಗುರಿ ಆಯ್ಕೆ ಹಾಗೂ ಯುದ್ಧಭೂಮಿಯ ಅಣುಕು ಪ್ರದರ್ಶನಕ್ಕೆ ಅಮೆರಿಕ ಸೇನೆ ಕ್ಲಾಡ್ ಅನ್ನು ಬಳಸಿಕೊಂಡಿದೆ. ಇರಾನ್ ಮೇಲೆ ದಾಳಿ ನಡೆಸುವುದಕ್ಕೂ ಮುನ್ನ ಆಂಥ್ರೋಪಿಕ್ ಅನ್ನು ಮೂಲಭೂತವಾದಿ ಎಡಪಂಥೀಯ ಕಂಪನಿ ಎಂದು ಡೊನಾಲ್ಡ್ ಟ್ರಂಪ್ ಟೀಕಿಸಿದ್ದರು. ಅಲ್ಲದೆ ಕ್ಲಾಡ್ ಬಳಕೆಯನ್ನು ನಿಲ್ಲಿಸಬೇಕು ಎಂದು ಎಲ್ಲಾ ಫೆಡರಲ್ ಸಂಸ್ಥೆಗಳಿಗೆ ಸೂಚನೆ ನೀಡಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.