2026-04-24 12:19:51

High Court big shock for POCSO accused | ಪೋಕ್ಸೋ ಆರೋಪಿಗಳಿಗೆ ಹೈಕೋರ್ಟ್ ಬಿಗ್ ಶಾಕ್ | Speed news kannada

High Court big shock for POCSO accused | ಪೋಕ್ಸೋ ಆರೋಪಿಗಳಿಗೆ ಹೈಕೋರ್ಟ್ ಬಿಗ್ ಶಾಕ್ | Speed news kannada

ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಪೋಕ್ಸೊ ಕಾಯ್ದೆಯಡಿಯಲ್ಲಿ ಆರೋಪಿಗಳಿಗೆ ‘ಡಿಫಾಲ್ಟ್ ಜಾಮೀನು’ ಸಿಗುವ ವಿಚಾರಕ್ಕೆ ಸ್ಪಷ್ಟತೆ ನೀಡಿದೆ.ಬಿಎನ್‌ಎಸ್‌ಎಸ್‌ನ ಸೆಕ್ಷನ್ 193(2) ಅಡಿಯಲ್ಲಿ 60 ದಿನಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಜಾಮೀನು ಪಡೆಯಬಹುದು ಎಂಬ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ವಿಶೇಷವಾಗಿ ಪೋಕ್ಸೊಂತಹ ಸಂತ್ರಸ್ತ-ಕೇಂದ್ರಿತ ಕಾಯ್ದೆಗಳಲ್ಲಿ ಈ ನಿಯಮ ಅನ್ವಯಿಸುವುದಿಲ್ಲ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಗೋವಿಂದ ಎಂಬ ಆರೋಪಿಯು 90 ದಿನಗಳೊಳಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದರೂ ಅದು ಅಪೂರ್ಣವಾಗಿದೆ ಎಂದು ಹೇಳಿ ಜಾಮೀನು ಕೋರಿದ್ದರು. ಆದರೆ, ಎಫ್‌ಎಸ್‌ಎಲ್ ಅಥವಾ ಸಿಡಿಆರ್ ವರದಿಗಳು ಇಲ್ಲದಿದ್ದರೂ ಚಾರ್ಜ್‌ಶೀಟ್ ಸಲ್ಲಿಕೆಯನ್ನು ಅಂತಿಮ ವರದಿಯೆಂದು ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಹೀಗಾಗಿ, ಕಾನೂನುಬದ್ಧ ಅವಧಿಯೊಳಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದರಿಂದ ‘ಡಿಫಾಲ್ಟ್ ಜಾಮೀನು’ ನೀಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.ಈ ಪ್ರಕರಣವು ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಗಳ ಅಡಿಯಲ್ಲಿ ದಾಖಲಾಗಿದ್ದು, ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಆಕೆಯ ಆತ್ಮಹತ್ಯೆ ಹಿನ್ನೆಲೆಯಲ್ಲಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.