2026-04-23 09:36:12

High Court quashes land grabbing case against Ravi Shankar Guruji | ರವಿಶಂಕರ್ ಗುರೂಜಿ ವಿರುದ್ಧದ ಭೂ ಕಬಳಿಕೆ ಪ್ರಕರಣ ರದ್ದುಗೊಳಿಸಿದ ಹೈ ಕೋರ್ಟ್‌ | Speed news kannada

High Court quashes land grabbing case against Ravi Shankar Guruji | ರವಿಶಂಕರ್ ಗುರೂಜಿ ವಿರುದ್ಧದ ಭೂ ಕಬಳಿಕೆ ಪ್ರಕರಣ ರದ್ದುಗೊಳಿಸಿದ ಹೈ ಕೋರ್ಟ್‌ | Speed news kannada

ರವಿಶಂಕರ್ ಗುರೂಜಿ ವಿರುದ್ಧದ ಭೂ ಕಬಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ, ರವಿಶಂಕರ್ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲದೆ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ತಿಳಿಸಿ ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದೆ.

ರವಿಶಂಕರ ಗುರೂಜಿಯವರ ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದಡಿ ದೂರು ದಾಖಲಾಗಿತ್ತು. ಈ ಪ್ರಕರಣದ ಹಿನ್ನಲೆಯಲ್ಲಿ ರವಿಶಂಕರ್‌ ಗುರೂಜಿಯವರು ಹೈ ಕೋರ್ಟಿನ ಮೆಟ್ಟಿಲೇರಿದ್ದರು. ಪ್ರಕರಣ ಪರಿಶೀಲಿಸಿದ ಕರ್ನಾಟಕ ಹೈಕೋರ್ಟ್ ದೂರುದಲ್ಲಿ ಅರ್ಜಿದಾರರ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲವೆಂದು ಗಮನಿಸಿದೆ. ಹೀಗಾಗಿ ಕೇವಲ ಪ್ರತಿವಾದಿಯಾಗಿ ಹೆಸರು ಸೇರಿಸಿರುವುದನ್ನು ಆಧಾರವನ್ನಾಗಿಟ್ಟುಕೊಂಡು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ನ್ಯಾಯಾಲಯವು ಗುರೂಜಿ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.