2026-06-08 04:55:12

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ತಡೆ; ನಾಳೆ ರಸ್ತೆಗಿಳಿಯಲಿವೆ ಬಸ್‌ ಗಳು |Speed News Kannada

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ತಡೆ; ನಾಳೆ ರಸ್ತೆಗಿಳಿಯಲಿವೆ ಬಸ್‌ ಗಳು |Speed News Kannada

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಈ ಮೂಲಕ ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಹೈಕೋರ್ಟ್‌ ಬಿಗ್‌ ಶಾಕ್‌ ನೀಡಿದೆ.  ಸರ್ಕಾರ ಮಾತುಕತೆ ನಡೆಸಲು ಮುಂದಾಗಬೇಕು ಎಂದೂ ಸೂಚನೆ ನೀಡಿ ಸರ್ಕಾರ ಮತ್ತು ಸಾರಿಗೆ ನೌಕರರ ಸಂಸ್ಥೆಗಳಿಗೆ ನೋಟಿಸ್‌ ನೀಡಿದೆ.
ಸಾರಿಗೆ ನೌಕರರ ಮುಷ್ಕರ ಕುರಿತು ಹೈಕೋರ್ಟ್‌ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್)‌ ಸಲ್ಲಿಕೆಯಾಗಿದ್ದವು. ಇಂದು ಈ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿಗಳಾದ ಸೂರಜ್‌ ಗೋವಿಂದರಾಜ್‌ ಮತ್ತು ಮನ್ಮಥ ರಾವ್‌ ಅವರ ಪೀಠದಲ್ಲಿ ನಡೆಯಿತು. ನಂತರ ವಿಚಾರಣೆ ಗುರುವಾರಕ್ಕೆ ಮುಂದೂಡಿತು. ಹೀಗಾಗಿ ನಾಳೆ ಹಮ್ಮಿಕೊಂಡಿದ್ದ ಮುಷ್ಕರ ಮುಂದೂಡಿಕೆಯಾಗಿದೆ.

ಈ ಮಧ್ಯೆ ಮುಷ್ಕರದಿಂದ ಹಿಂದೆ ಸರಿಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ ಕೆ.ಆರ್‌ ಜಗದೀಶ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.