2026-06-08 04:58:01

Himanta Sarma sworn in for 2nd term as Assam Chief Minister | ಅಸ್ಸಾಂ ಸಿಎಂ ಆಗಿ 2ನೇ ಬಾರಿಗೆ ಹಿಮಂತ್‌ ಬಿಸ್ವಾ ಶರ್ಮಾ ಪ್ರಮಾಣವಚನ| Speed News Kannada

Himanta Sarma sworn in for 2nd term as Assam Chief Minister | ಅಸ್ಸಾಂ ಸಿಎಂ ಆಗಿ 2ನೇ ಬಾರಿಗೆ ಹಿಮಂತ್‌ ಬಿಸ್ವಾ ಶರ್ಮಾ ಪ್ರಮಾಣವಚನ| Speed News Kannada

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಖಾನಾಪಾರಾದ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ  ನಡೆದ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಲಕ್ಷ್ಮಣ ಪ್ರಸಾದ್‌ ಆಚಾರ್ಯ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

2021ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಸಚಿವರಾದ ಅಮಿತ್ ಶಾ, ರಾಜನಾಥ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಹಾಜರಿದ್ದರು.

ಅಸ್ಸಾಂನಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ಅಧಿಕಾರದ ಗದ್ದುಗೆ ಹಿಡಿದಿದೆ. ಹಿಮಂತ್‌ ಅವರ ಜತೆ ಇನ್ನೂ ನಾಲ್ವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

126 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಒಕ್ಕೂಟ 102 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಬಿಜೆಪಿ 82 ಸ್ಥಾನಗಳಲ್ಲಿ ಗೆದ್ದಿದ್ದರೆ ಮಿತ್ರ ಪಕ್ಷಗಳಾದ ಎಜಿಪಿ ಮತ್ತು ಬಿಪಿಎಫ್‌ ತಲಾ 10 ಸ್ಥಾನಗಳಲ್ಲಿ ಗೆಲುವು ದಾಖಲಿಸಿವೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.