2026-06-25 03:40:31

Hit & run accident near Nelamangala|ನೆಲಮಂಗಲ ಬಳಿ ಹಿಟ್ & ರನ್ ದುರಂತ|Speed News Kannada

Hit & run accident near Nelamangala|ನೆಲಮಂಗಲ ಬಳಿ ಹಿಟ್ & ರನ್ ದುರಂತ|Speed News  Kannada

ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಹುಸ್ಕೂರು ಎಪಿಎಂಸಿ ಬಳಿ ನಡೆದ ಹಿಟ್ & ರನ್ ಘಟನೆದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಮೃತರನ್ನು ಗಿರೀಶ್ (30) ಎಂದು ಗುರುತಿಸಲಾಗಿದೆ. ಅವರು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಶುಕ್ರವಾರ ತಡರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.ಟಾಟಾ ಏಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಿರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ಶುಕ್ರವಾರ ತಡರಾತ್ರಿ ಸುಮಾರು 12:41ಕ್ಕೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ಗಿರೀಶ್, ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ತಂದೆಯ ಮರಣದ ಬಳಿಕ ಕುಟುಂಬದ ಆಧಾರವಾಗಿದ್ದರು ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರಿದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.