2026-04-23 10:53:10

Homestay owner and two others arrested | ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ, ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್ | Speed news kannada

Homestay owner and two others arrested | ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ, ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್ | Speed news kannada

ಕೊಡಗು ಜಿಲ್ಲೆಯ ವಿದೇಶಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದೆ. ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು, ಈ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆ ಮೇಲೆ  ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯಾಗಿರುವ ವೃಜೇಶ್ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಳು ಕೇಳಿ ಬಂದಿದ್ದು,  ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಮತ್ತು ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.