ಕೊಡಗು ಜಿಲ್ಲೆಯ ವಿದೇಶಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದೆ. ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು, ಈ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯಾಗಿರುವ ವೃಜೇಶ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಳು ಕೇಳಿ ಬಂದಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಮತ್ತು ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.